ದಾವಣಗೆರೆ: ಕೋವಿಡ್-19 ಹೆಚ್ಚಳ ಹಿನ್ನೆಲೆ ಏ. 17 ರಂದು ನ್ಯಾಮತಿ ತಾಲ್ಲೂಕಿನ ಬೆಳಗುತ್ತಿ ಆಯೋಜಿಸಿದ್ದ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆಯ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಸರ್ಕಾರದ ನಿರ್ದೇಶನದಂತೆ ರದ್ದುಪಡಿಸಲಾಗಿದೆ.
ಹೊನ್ನಾಳಿ ತಾಲ್ಲೂಕಿನ ಕಸಬಾ ಹೋಬಳಿಯ ಸೊರಟೂರು, ಜಗಳೂರು ತಾಲ್ಲೂಕಿನ ಕಸಬಾ ಹೋಬಳಿಯ ಹಾಲೇಹಳ್ಳಿ, ದಾವಣಗೆರೆ ತಾಲ್ಲೂಕಿನ ಕಸಬಾ ಹೋಬಳಿಯ ಪುಟಗನಾಳು, ಹರಿಹರ ತಾಲ್ಲೂಕಿನ ಮಲೆಬೆನ್ನೂರು ಹೋಬಳಿಯ ಯಲವಟ್ಟಿ, ಹಾಗೂ ಚನ್ನಗಿರಿ ತಾಲ್ಲೂಕಿನ ಬಸವಾಪಟ್ಟಣ-2 ಹೋಬಳಿಯ ನಲ್ಕುದುರೆ ಗ್ರಾ ಗ್ರಾಮ ವಾಸ್ತವ್ಯವನ್ನು ರದ್ದುಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



