ದಾವಣಗೆರೆ: ನಾಳೆ ಜಿಲ್ಲೆಯ ಹರಿಹರ ತಾಲ್ಲೂಕು ಕಸಬಾ ಹೋಬಳಿ ರಾಮತೀರ್ಥ ಗ್ರಾಮದಲ್ಲಿ “ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಂದಾಯ ಇಲಾಖೆಯ ವಿವಿಧ ಸೇವೆಗಳು ಹಾಗೂ ಯೋಜನೆಗಳಾದ ಪೌತಿ ಖಾತೆ ಬದಲಾವಣೆ, ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿ ಸೌಲಭ್ಯ, ಅತಿವೃಷ್ಟಿ/ ಬರ ಪರಿಹಾರ, ಪಡಿತರ ಚೀಟಿ, ಪಹಣಿ ಲೋಪದೋಷ ತಿದ್ದುಪಡಿ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಮತ್ತು ಈಗಾಗಲೇ ಸಾರ್ವಜನಿಕರಿಂದ ಸ್ವೀಕರಿಸಲಾಗಿರುವ ಅರ್ಜಿಗಳನ್ನು ಗ್ರಾಮ ವಾಸ್ತವ್ಯದಲ್ಲಿ ಇತ್ಯರ್ಥಪಡಿಸಲಾಗುವುದು.
ಉಳಿದಂತೆ ದಾವಣಗೆರೆ ತಾಲ್ಲೂಕು ಮಾಯಕೊಂಡ ಹೋಬಳಿಯ ಯರವ್ವನಾಗ್ತಿಹಳ್ಳಿ, ಚನ್ನಗಿರಿ ತಾಲ್ಲೂಕು ಉಬ್ರಾಣಿ ಹೋಬಳಿಯ ಗೋಪ್ಪೇನಹಳ್ಳಿ, ಹೊನ್ನಾಳಿ ತಾಲ್ಲೂಕು ಕಸಬಾ ಹೋಬಳಿಯ ಕತ್ತಿಗೆ, ನ್ಯಾಮತಿ ತಾಲ್ಲೂಕಿನ ಬೆಳಗುತ್ತಿ ಹೋಬಳಿಯ ಫಲವನಹಳ್ಳಿ ಗ್ರಾಮಗಳಲ್ಲಿ ತಹಶೀಲ್ದಾರರುಗಳು ತಮ್ಮ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಿದ್ದಾರೆ. ಜಗಳೂರು ತಾಲ್ಲೂಕು ಬಿಳಿಚೋಡು ಹೋಬಳಿಯ ಪಲ್ಲಾಗಟ್ಟೆ ಗ್ರಾಮದಲ್ಲಿ ಶನಿವಾರದ ಬದಲಿಗೆ ಆಗಷ್ಟ್ 26 ರ ಶುಕ್ರವಾರದಂದು ಗ್ರಾಮ ವಾಸ್ತವ್ಯ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



