ದಾವಣಗೆರೆ: ಮಾ.18 ರ ಗುರುವಾರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜನಸ್ಪಂದನ ಸಭೆಯನ್ನು ಏರ್ಪಡಿಸಲಾಗಿದೆ. ಈ ವೇಳೆ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಾಗುವುದು. ಹೀಗಾಗಿ ಸಾರ್ವಜನಿಕರು ತಮ್ಮ ಅಹವಾಲುಗಳೊಂದಿಗೆ ಸಭೆಗೆ ಹಾಜರಾಗಿ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.