Connect with us

Dvgsuddi Kannada | online news portal | Kannada news online

ದಾವಣಗೆರೆ: ಕೋಳಿ ಶೀತ ಜ್ವರಕ್ಕೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ; ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಸ್ಪಷ್ಟನೆ

davangere dc 8

ದಾವಣಗೆರೆ

ದಾವಣಗೆರೆ: ಕೋಳಿ ಶೀತ ಜ್ವರಕ್ಕೆ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ; ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಸ್ಪಷ್ಟನೆ

ದಾವಣಗೆರೆ: ಕೋಳಿಶೀತ ಜ್ವರವು (ಹಕ್ಕಿ ಜ್ವರ) ಹೆಚ್5ಎನ್1 ವೈರಸ್ ( Influenza A virus subtype H5N1) ನಿಂದ ಪಕ್ಷಿಗಳಿಗೆ ಹರಡುವ ಖಾಯಿಲೆಯಾಗಿದ್ದು, ಮನುಷ್ಯರಿಂದ ಮನುಷ್ಯರಿಗೆ ಸಾಂಕ್ರಮಿಕವಾಗಿ ಹರಡುವುದಿಲ್ಲ. ಹಾಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ, ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಎಸ್‍ಓಪಿ ಅಳವಡಿಸಲು ಕ್ರಮವಹಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ ಅವರು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕೋಳಿಶೀತ ಜ್ವರಕ್ಕೆ ಸಂಬಂಧಿಸಿದಂತೆ ಏರ್ಪಡಿಸಿದ್ದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಾಮಾನ್ಯವಾಗಿ ಶೀಥಲ ಪ್ರದೇಶದ ವಲಸೆ ಹಕ್ಕಿಗಳು ವಂಶಾಭಿವೃದ್ಧಿಗಾಗಿ ಬಂದಾಗ ಹಿಕ್ಕೆ, ಪುಕ್ಕ ಹಾಗೂ ಬಾಯಿ ಮತ್ತು ಕಣ್ಣಿನಿಂದ ಹೊರ ಬರುವ ಸ್ರವಿಕೆಯಿಂದ ಕಾಯಿಲೆ ಹರಡು ಸಂಭವವಿದ್ದು, ಪಕ್ಷಿಗಳಿಗೆ ರೋಗವು ಹರಡುತ್ತದೆ ಎಂದು ತಿಳಿಸಿದರು.

ಇದು ಬಳ್ಳಾರಿ ಜಿಲ್ಲೆಯಯಲ್ಲಿ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿನ ಕುಕ್ಕುಟ ಸಂವರ್ಧನಾ ಕೇಂದ್ರದಲ್ಲಿ ಸಾಕಾಣಿಕೆ ಮಾಡಿದ ಅಸಿಲ್ ಮತ್ತು ಕಾವೇರಿ ತಳಿಯ ಕೋಳಿಗಳಿಗೆ ಫೆಬ್ರವರಿ 23 ರಂದು ಕೋಳಿ ಶೀತ ಜ್ವರ ರೋಗದ ಲಕ್ಷಣ ಕಂಡುಬಂದು ಕೆಲವು ಕೋಳಿಗಳು ಮರಣ ಹೊಂದಿದ್ದವು. ಪರೀಕ್ಷೆಗಾಗಿ ಭೋಪಾಲ್‍ನ ರಾಷ್ಟ್ರೀಯ ಹೈ ಸೆಕ್ಯುರಿಟಿ ಪ್ರಾಣಿ ರೋಗಗಳ ಪ್ರಯೋಗಾಲಯಕ್ಕೆ ಕಳುಹಿಸಿದ್ದು ಸಂಸ್ಥೆಯು ಕೋಳಿಶೀತ ಜ್ವರವೆಂದು ದೃಢೀಕರಿಸಿರುತ್ತದೆ. ಇದಕ್ಕಾಗಿ ಬಳ್ಳಾರಿಯಿಂದ ಹಾಗೂ ಚಿಕ್ಕಬಳ್ಳಾಪುರದಿಂದ ದಾವಣಗೆರೆಗೆ ಸಾಗಾಣಿಕೆಯಾಗುವ ಕೋಳಿಗಳನ್ನು ನಿರ್ಬಂಧಿಸಲು ಚೆಕ್‍ಪೋಸ್ಟ್ ಗಳನ್ನು ಸ್ಥಾಪನೆ ಮಾಡಿ ಸಂಪೂರ್ಣ ನಿಗಾವಹಿಸಲು ಮತ್ತು ಎಲ್ಲಿಯಾದರೂ ಹಕ್ಕಿಗಳು ಮರಣ ಹೊಂದಿದಲ್ಲಿ, ತಕ್ಷಣ ಮಾಹಿತಿ ನೀಡಲು ಸಹಾಯವಾಣಿ ಸ್ಥಾಪಿಸಲಾಗುತ್ತಿದೆ ಎಂದರು.

ಬೇಯಿಸಿ ನಂತರ ಸೇವಿಸಿ:ಸಾರ್ವಜನಿಕರು ಮಾಂಸ ಮತ್ತು ಮೊಟ್ಟೆಗಳನ್ನು 70 ಡಿಗ್ರಿ ಅಧಿಕ ಉಷ್ಠಾಂಶದಲ್ಲಿ ಕನಿಷ್ಠ 30 ನಿಮಿಷ ಬೇಯಿಸಿದಾಗ ವೈರಾಣು ನಾಶಗೊಳ್ಳುತ್ತದೆ. ಹಾಗಾಗಿ ಸಾರ್ವಜನಿಕರು ಮಾಂಸ ಮತ್ತು ಮೊಟ್ಟೆಗಳನ್ನು ಚೆನ್ನಾಗಿ ಬೇಯಿಸಿದ ನಂತರ ಸೇವನೆ ಮಾಡಬೇಕು ಎಂದು ಹೇಳಿದರು.

ಜಿಲ್ಲೆಯಲ್ಲಿ ಒಟ್ಟು 172 ಮಾಂಸದ ಕೋಳಿ ಫಾರಂಗಳಲ್ಲಿ 97 ಕಾರ್ಯನಿರ್ವಹಿಸುತ್ತಿದ್ದು ಇವುಗಳಲ್ಲಿ 498825 ಅಂದಾಜು ಬ್ರಾಯ್ಲರ್ ಕೋಳಿಗಳಿವೆ. ಹಾಗೂ 31 ಮೊಟ್ಟೆ ಕೋಳಿ ಸಾಕಾಣಿಕೆ ಕೇಂದ್ರಗಳಲ್ಲಿ 2473435 ಕೋಳಿಗಳಿವೆ. ಈ ಕೇಂದ್ರಗಳಲ್ಲಿ ಕೋಳಿಗಳು ಮರಣಹೊಂದಿದಲ್ಲಿ ವೈಜ್ಞಾನಿಕವಾಗಿ ನಿರ್ವಹಣೆ ಮಾಡಲು ಎಲ್ಲಾ ಫಾರಂಗಳ ಮಾಲಿಕರಿಗೆ ಸೂಚನೆ ನೀಡಲಾಗಿದೆ. ಯಾವುದೇ ಫಾರಂಗಳಲ್ಲಿ ಕೋಳಿಗಳ ಮರಣ ಹೊಂದಿದಲ್ಲಿ ತಕ್ಷಣ ಪಶುಸಂಗೋಪನಾ ಇಲಾಖೆ ಗಮನಕ್ಕೆ ತಂದು, ಈ ಹಕ್ಕಿಜ್ವರ ಹರಡದಂತೆ ಕ್ರಮ ವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ:
ಹಕ್ಕಿ ಜ್ವರದ ನಿಯಂತ್ರಣ ಮಾರ್ಗಸೂಚಿಯಂತೆ ಕಟ್ಟೆಚ್ಚರ ವಹಿಸಲು ಜಿಲ್ಲೆಯ ವಿವಿಧ ತಾಲ್ಲೂಕುಗಳ ಪಶುಪಾಲನಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಯವರಿಗೆ ತರಬೇತಿ ನೀಡಿ ಸೂಕ್ತ ಮಾರ್ಗದರ್ಶನ ನೀಡಲು ತುರ್ತು ಸಂದರ್ಭದಲ್ಲಿ ತ್ವರಿತವಾಗಿ ಕ್ರಮ ಜರುಗಿಸಲು ಪಶುವೈದ್ಯಾಧಿಕಾರಿಗಳ ನೇತೃತ್ವದಲ್ಲಿ 38 ಕ್ಷೀಪ್ರ ಪ್ರತಿಕ್ರಿಯೆ ತಂಡ (ರಾಪಿಡ್ ರೆಸ್ಪಾನ್ಸ್ ಟೀಮ್) ತಂಡಗಳನ್ನು ರಚನೆ ಮಾಡಲಾಗಿದೆ ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ; ಸುರೇಶ್ ಬಿ.ಇಟ್ನಾಳ್ ಮಾತನಾಡಿ, ಜಿಲ್ಲೆಯಲ್ಲಿ ಕೋಳಿ, ಬಾತುಕೋಳಿ, ವಲಸೆ ಬರುವ ಹಕ್ಕಿಗಳಲ್ಲಿ ಅಸಹಜ ಸಾವು ಉಂಟಾದಲ್ಲಿ ಕೂಡಲೇ ಹತ್ತಿರದ ಪಶು ವೈದ್ಯಕೀಯ ಇಲಾಖೆಗೆ ಮಾಹಿತಿ ನೀಡಬೇಕು. ಕೋಳಿ ಶೀತ ಜ್ವರದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಕೋಳಿ ಸಾಕಾಣಿಕಾ ಕೇಂದ್ರಗಳ ಮಾಲೀಕರಿಗೆ ಕೋಳಿಗಳಲ್ಲಿ ಅಸಹಜ ಸಾವು ಕಂಡು ಬಂದಲ್ಲಿ ತಕ್ಷಣವೇ ಪಶು ಪಾಲನಾ ಇಲಾಖೆಗೆ ತಿಳಿಸುವಂತೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ ಕೋಳಿ ಮಾಂಸ ಮತ್ತು ಮೊಟ್ಟೆ ಮಾರಾಟ ಅಂಗಡಿಗಳಲ್ಲಿ ಉತ್ಪಾದನೆಯಾಗುವ ತ್ಯಾಜ್ಯಗಳನ್ನು ಸೂಕ್ತ ರೀತಿಯಲ್ಲಿ ವಿಲೇವಾರಿ ಮಾಡಲು ಕ್ರಮವಹಿಸಲು ಸೂಚನೆ ನೀಡಲಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ್, ಪಶುಸಂಗೋಪನಾ ಇಲಾಖೆ ಉಪನಿರ್ದೇಶಕ ಡಾ; ಮಹೇಶ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

davangere lokayukta visit 2
davangere mahanagara palike dvgsuddi
davangere lokayukta 2
Morarji Desai school 1
davangere lokayukta visit 1
Advertisement
Advertisement Enter ad code here

Title

To Top