Connect with us

Dvgsuddi Kannada | online news portal | Kannada news online

ದಾವಣಗೆರೆ: ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆ ಪೂರ್ಣಗೊಳಿಸಲು ಸೂಚನೆ

ದಾವಣಗೆರೆ

ದಾವಣಗೆರೆ: ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆ ಪೂರ್ಣಗೊಳಿಸಲು ಸೂಚನೆ

ದಾವಣಗೆರೆ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಷಟ್ಪಥ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸುವ ಕೆಲಸ ದಾವಣಗೆರೆ ಕೆಲವು ಭಾಗದಲ್ಲಿ ಮಾತ್ರ ಬಾಕಿ ಇದ್ದು ಇದರಿಂದ ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ಇದರಿಂದ ಅಪಘಾತಗಳು ಸಂಭವಿಸಬಹುದಾಗಿದ್ದು, ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ದಾವಣಗೆರೆ ನಗರಕ್ಕೆ ಹೊಂದಿಕೊಂಡಂತೆ ಹಾಗೂ ಕುಂದುವಾಡ ಬ್ರಿಡ್ಜ್, ಅಗಸನಕಟ್ಟೆ ಬಳಿ ಸರ್ವೀಸ್ ರಸ್ತೆ ಬಾಕಿ ಇದ್ದು ರೈತರು ಅಡ್ಡಿಪಡಿಸುತ್ತಿದ್ದಾರೆ ಎಂದು ತಿಳಿಸಿದ್ದು ಕಾನೂನು ಪ್ರಕಾರ ರೈತರಿಗೆ ಸಿಗಬೇಕಾದ ಪರಿಹಾರದ ಮೊತ್ತವನ್ನು ಪಾವತಿಸಿ ಅಥವಾ ಠೇವಣಿ ಇಟ್ಟು ಕಾಮಗಾರಿ ಮುಂದುವರೆಸಲು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿ ಅಗತ್ಯವಿದ್ದಲ್ಲಿ ಪೊಲೀಸ್ ರಕ್ಷಣೆ ಒದಗಿಸಿಕೊಡಲಾಗುತ್ತದೆ ಎಂದರು.

ಸರ್ವೀನ್ ರಸ್ತೆ ಕಾಮಗಾರಿ ಬಾಕಿ ಇರುವುದರಿಂದ ಅಪಘಾತಗಳು ಹೆಚ್ಚು ಸಂಭವಿಸಬಹುದಾಗಿದ್ದು ಆದಷ್ಟು ಬೇಗ ಕಾಮಗಾರಿ ಮುಕ್ತಾಯ ಮಾಡಲು ಸೂಚನೆ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪಿ.ಎನ್ ಲೊಕೇಶ್, ಜಿಲ್ಲಾ ರಕ್ಷಣಾಧಿಕಾರಿ ಉಮಾ ಪ್ರಶಾಂತ, ಉಪವಿಭಾಗಾಧಿಕಾರಿ ಸಂತೋಷ್ ಪಾಟೀಲ್, ತಹಸಿಲ್ದಾರ್ ಅಶ್ವಥ್, ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಶಿವಕುಮಾರ್ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top