ದಾವಣಗೆರೆ: ಅಶೋಕ ಟಾಕೀಸ್ ಬಳಿ ರೈಲ್ವೆ ಅಂಡರ್‌ ಪಾಸ್ ನಿರ್ಮಾಣಕ್ಕೆ ಭೂಸ್ವಾಧೀನ ನಡೆಸಿ; ರೈಲ್ವೆ, ಕಂದಾಯ ಇಲಾಖೆ ಅಧಿಕಾರಿಗಳಿಗೆ ಡಿಸಿ ಸೂಚನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಬಹು ವರ್ಷಗಳಿಂದ ಸಮಸ್ಯೆಯಾಗಿದ್ದ‌ಅಶೋಕ ಚಿತ್ರಮಂದಿ ರಸಮೀಪ ರೈಲ್ವೆ ಅಂಡರ್‌ಪಾಸ್ ನಿರ್ಮಿಸಲು ಕೇಂದ್ರ ಸರ್ಕಾರ 49 ಕೋಟಿ ಅನುದಾನ ನೀಡಿದ್ದು, ಕಾಮಗಾರಿಗೆ ಅಗತ್ಯ ಭೂ ಸ್ವಾಧೀನಕ್ಕೆ ಪ್ರಸ್ತಾವನೆ ಸಲ್ಲಿಸಲು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್ ರೈಲ್ವೆ ಮತ್ತು ಕಂದಾಯ ಅಧಿಕಾರಿಗಳಿಗೆ ಸೂಚಿಸಿದರು.

ಅಶೋಕ ಚಿತ್ರ ಮಂದಿರ ಬಳಿ ರೈಲ್ವೆ ಅಂಡರ್‌ಪಾಸ್ ನಿರ್ಮಾಣ ಕುರಿತ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ ಅಶೋಕ ಚಿತ್ರಮಂದಿರ ಬಳಿ ರೈಲ್ವೆ ಅಂಡರ್‌ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರವು 49 ಕೋಟಿಗೂ ಅಧಿಕ ಅನುದಾನ ಬಿಡುಗಡೆ ಮಾಡಿದೆ. ತಕ್ಷಣವೇ ರೈಲ್ವೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಅಶೋಕ ಟಾಕೀಸ್ ಬಳಿಯ ರೈಲ್ವೆ ಅಂಡರ್‌ಪಾಸ್ ನಿರ್ಮಾಣಕ್ಕೆ ಅಗತ್ಯ ಸ್ವತ್ತುಗಳ ಭೂ ಸ್ವಾಧೀನಕ್ಕೆ ಪ್ರಸ್ತಾವನೆ ಸಲ್ಲಿಸುವ ಕೆಲಸ ಮಾಡಬೇಕು ಎಂದರು.

ಉಪ ವಿಭಾಗಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಳ್ಳಬೇಕು. ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೇ ಮಾರ್ಗವು‌ ತೋಳಹುಣಸೆ, ಬುಳ್ಳಾಪುರ, ಆನಗೋಡು, ನೀರ್ಥಡಿ, ಹೆಬ್ಬಾಳ್, ಹುಣಸೇಕಟ್ಟೆ, ಪಂಚೇನಹಳ್ಳಿ, ಚಿಕ್ಕವ್ವನಹಳ್ಳಿ, ಕರಿಲಕ್ಕೇನಹಳ್ಳಿ, ಚಟ್ಟೋಬನಹಳ್ಳಿ, ಕೊಗ್ಗನರು, ಹಾಲುವರ್ತಿ ಗ್ರಾಮಗಳ ಮೂಲಕ ಹಾದು ಹೋಗಲಿದೆ. ರೈಲು
ಮಾರ್ಗ ಸಾಗುವ ರಂಗವ್ವನಹಳ್ಳಿ, ಚಟ್ಟೋಬನಹಳ್ಳಿ ಯಲ್ಲಿ ಬಾಕಿ ಇರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ರೈತರ ಜಮೀನುಗಳ ಸರ್ವೇ ಮಾಡಿ, ಭೂ ಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸಿ.ಅರಣ್ಯ ಪ್ರದೇಶದಲ್ಲಿ ಸಾಗುವಳಿ ಮಾಡುತ್ತಿದ್ದವರ ಜಮೀನುಗಳು ರೈಲ್ವೆ ಮಾರ್ಗದ ಸ್ವಾಧೀನಕ್ಕೆ ಬಂದಲ್ಲಿ ಅಂತಹ ಸಾಗುವಳಿದಾರರಿಗೆ ಬೇರೆಡೆ ಜಮೀನು ನೀಡಿ
ಸಕ್ರಮಗೊಳಿಸಿಕೊಳ್ಳಬೇಕು.

ತುಮಕೂರು-ಚಿತ್ರದುರ್ಗ-ದಾವಣಗೆರೆ ನೇರ ರೈಲ್ವೆ ಮಾರ್ಗದ‌ಕಾಮಗಾರಿ ತ್ವರಿತವಾಗಿ ನಮ್ಮ ಜಿಲ್ಲೆಯಲ್ಲಿ ಬಾಕಿ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ‌ಕೈಗೊಂಡು, ಕಾಮಗಾರಿಗೆ ಅನುಕೂಲವಾಗುವಂತೆ ಅನುವು ಮಾಡಿ ಕೊಡಿ. ಸರ್ಕಾರ ನಿಗದಿಪಡಿಸಿದ ನಿಗದಿತ ದರವನ್ನು ಅರ್ಹ ರೈತರಿಗೆ ಪಾವಕತಿಸಿ, ಆರ್‌ಟಿಸಿ ತಿದ್ದುಪಡಿ ಮಾಡಿ, ಕ್ರಮ ಮಾಡಿಕೊಳ್ಳಬೇಕು ಎಂದು ಆದೇಶಿಸಿದರು.

ರೈಲ್ವೆ ಮತ್ತು‌ ಕ೦ದಾಯ ಇಲಾಖೆಗಳ ಮೂಲಕ ಈಗಾಗಲೇ ಸರ್ವೇ‌ಕಾರ್ಯಆರಂಭವಾಗಿದ್ದು, ಶೀಘ್ರವೇಭೂಸ್ವಾಧೀನಕ್ಕೆ ಒಳಪಡುವ ಜಮೀನುಗಳ ಮೂಲ ದಾಖಲೆಗಳ ಪರಿಶೀಲಿಸಿ, ಪೋಡಿ ದುರಸ್ತಿ ಕಾರ್ಯ ಕೈಗೊಳ್ಳಬೇಕು. ರೈತರು ಯಾವುದೇ ಗೊಂದಲಕ್ಕೆ ಒಳಗಾಗದಂತೆ ನ್ಯಾಯ ಸಮ್ಮತವಾಗಿ ಭೂ ಸ್ವಾಧೀನ
ಮಾಡಿಕೊಳ್ಳಬೇಕು. ರೈಲ್ವೆ ಮಾರ್ಗ ಹಾದು ಹೋದಜಮೀನುಗಳಲ್ಲಿ ಯಾವುದೇ ತಕರಾರು,ಇಂಡೀಕರಣ,ಫೋಡಿ ಹಾಗೂತಾಂತ್ರಿಕ ಸಮಸ್ಯೆಗಳಾದಲ್ಲಿ ಶೀಘ್ರವೇ ಪರಿಹರಿಸಬೇಕು ಎಂದು ಸೂಚಿಸಿದರು. ಅಪರ ಜಿಲ್ಲಾಧಿಕಾರಿ ಪಿ.ಎನ್.ಲೋಕೇಶ, ಉಪವಿ ಭಾಗಾಧಿಕಾರಿ ಎನ್.ದುರ್ಗಾಶ್ರೀ, ತಹಸೀಲ್ದಾರ್‌ ಡಾ .ಅಶ್ವತ್,ಜಿಲ್ಲಾ ಭೂದಾಖಲೆಗಳ ಉಪನಿರ್ದೇಶಕಿ ಭಾವನಾ ಬಸವರಾಜ, ರೈಲ್ವೇ ಅಧಿಕಾರಿಗಳಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *