ದಾವಣಗೆರೆ: ಜಿಲ್ಲಾಧಿಕಾರಿಯವರು ಪ್ರಾದೇಶಿಕ ಸಾರಿಗೆ ಕಚೇರಿ ಮತ್ತು ಉಪನೋಂದಣಾಧಿಕಾರಿಗಳ ಕಚೇರಿಗೆ ಬುಧವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿ ಅಲ್ಲಿ ಕಂಡು ಬಂದ ಮಧ್ಯವರ್ತಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು.
ಪ್ರಾದೇಶಿಕ ಸಾರಿಗೆ ಕಚೇರಿ ಭೇಟಿ ನೀಡಿ ಕೌಂಟರ್‍ನಲ್ಲಿ ನಿಂತಿದ್ದ ಸಾರ್ವಜನಿಕರ ಎಫ್.ಸಿ, ನವೀಕರಣ, ಡ್ರೈವಿಂಗ್ ಲೈಸೆನ್ಸ್ ಹಾಗೂ ವಿವಿಧ ಪರವಾನಿಗೆ ಪಡೆದ ಕಡತಗಳನ್ನು ಪರಿಶೀಲಿಸಿದರು. ತದನಂತರ ಉಪನೋಂದನಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ ಅಲ್ಲಿನ ಸ್ಥಿತಿಗತಿ ಬಗ್ಗೆ ಪರಿಶೀಲಿಸಿದರು.