ದಾವಣಗೆರೆ: ಜ.25 ರಂದು ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ. ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆಯಲಿರುವುದರಿಂದ ಚುನಾವಣಾ ಕೇಂದ್ರಗಳ ಸುತ್ತಮುತ್ತ 100 ಮೀ ವ್ಯಾಪ್ತಿಯಲ್ಲಿ ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ್.ಎಂ.ವಿ ಆದೇಶಿಸಿರುತ್ತಾರೆ.
ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ., ದಾವಣಗೆರೆ ಇದರ ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ಜ.25 ರಂದು ಬೆಳಿಗ್ಗೆ 9 ಗಂಟೆಯಿಂದ ಮತದಾನ, ಮತ ಏಣಿಕೆ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಮಾತ್ರ ಚುನಾವಣಾ ಕೇಂದ್ರ ಹಾಗೂ ಮತ ಏಣಿಕೆ ಕೇಂದ್ರವಾದ ಸರ್ಕಾರಿ ಪದವಿ ಪೂರ್ವ ಕಾಲೇಜು, ಹೈಸ್ಕೂಲ್ ಮೈದಾನ ದಾವಣಗೆರೆ ಈ ಕೇಂದ್ರದ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.



