ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಕೊಣಚಗಲ್ ಗುಡ್ಡದಲ್ಲಿನ ಪುಷ್ಕರಣಿಯಲ್ಲಿ ಸ್ನೇಹಿತರೊಂದಿಗೆ ಈಜಲು ಹೋಗಿದ್ದ ಯುವಕ, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ದಾವಣಗೆರೆ ನಗರ ನಿವಾಸಿ ಫಾರುಖ್ (18) ಮೃತ ಯುವಕ. ಈ ಯುವಕ ತಾಲೂಕಿನ ಸಂತೆ ಮುದ್ದಾಪುರ ಗ್ರಾಮದ ಸಂಬಂಧಿಕರ ಮನೆಗೆ ಆಗಮಿಸಿದ್ದು, ಸ್ನೇಹಿತರೊಡನೆ ಈಜಲು ಹೋದಾಗ ಈ ಘಟನೆ ನಡೆದಿದೆ. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ವ್ಯಕ್ತಪಡಿಸಿದರು. ಸ್ಥಳಕ್ಕ ಬಿಳಿಚೋಡು ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ, ಅಗ್ನಿಶಾಮಕ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದೆ.ಮುಳುಗು ತಜ್ಞರು ಹಾಗೂ ಎನ್.ಸಿ.ಆರ್.ಎಫ್ ತಂಡ ಮೃತ ದೇಹ ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಬಿಳಿಚೋಡು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



