ದಾವಣಗೆರೆ: ಭದ್ರಾ ಕಾಲುವೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದ ಯುವಕ ಕೊಚ್ಚಿ ಹೋದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಲಿಂಗದಹಳ್ಳಿ ಗ್ರಾಮದಲ್ಲಿ ನಡೆದಿದೆ.
ನಾಗರಾಜ್ (33) ನೀರು ಪಾಲಾದ ಯುವಕನಾಗಿದ್ದಾನೆ. ಭದ್ರಾ ಕಾಲುವೆಯಲ್ಲಿ ಬಟ್ಟೆ ತೊಳೆಯಲು ಹೋಗಿದ್ದಾಗ ನೀರಿನ ಸೆಳೆತಕ್ಕೆ ಯುವಕ ಕೊಚ್ಚಿ ಹೋಗಿದ್ದಾನೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಶೋಧ ನಡೆಸುತ್ತಿದ್ದಾರೆ. ಬೆಳಗ್ಗೆಯಿಂದ ಹುಡುಕಾಟ ನಡೆಸಿದರೂ ಯುವಕನ ಮೃತದೇಹ ಪತ್ತೆಯಾಗಿಲ್ಲ. ಶೋಧ ಕಾರ್ಯ ಮುಂದುವರೆದಿದೆ.