ದಾವಣಗೆರೆ: ಅಮೆರಿಕಾದ ಮೇರಿಲ್ಯಾಂಡ ರಾಜ್ಯದ ಬಾಲ್ಟಿಮೋರ್ ನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದ ದಾವಣಗೆರೆ ಮೂಲದ ದಂಪತಿ ಹಾಗೂ ಮಗುವಿನ ಅಂತ್ಯಸಂಸ್ಕಾರವನ್ನು ಅಮೆರಿಕಾದಲ್ಲಿ ನಡೆಸಲಾಗಿದೆ.
ದಾವಣಗೆರೆ ಮೂಲದ ಯೋಗೇಶ್ ಹೊನ್ನಾಳ, ಪತ್ನಿ ಪ್ರತಿಭಾ ಹೊನ್ನಾಳ ಹಾಗೂ ಪುತ್ರ ಯಶ್ ಹೊನ್ನಾಳ ಆಗಸ್ಟ್ 15 ರಂದು ಅಮೆರಿಕಾದ ಮೇರಿಲ್ಯಾಂಡ ರಾಜ್ಯದ ಬಾಲ್ಟಿಮೋರ್ ನಲ್ಲಿರುವ ತಮ್ಮ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದರು.
ಇದೀಗ ಮೃತರ ಅಂತ್ಯಕ್ರಿಯೆಯನ್ನು ಅಮೆರಿಕಾದಲ್ಲೇ ವೀರಶೈವ ಸಂಪ್ರದಾಯದಲ್ಲೇ ನೆರವೇರಿಸಲಾಗಿದೆ. ಅಂತ್ಯಸಂಸ್ಕಾರದಲ್ಲಿ ಯೋಗೇಶ್ ಹಾಗೂ ಪ್ರತಿಭಾ ಕುಟುಂಬಸ್ಥರು ಭಾಗಿಯಾಗಿದ್ದರು.ಪತ್ನಿ ಹಾಗೂ ಪುತ್ರನನ್ನು ಗುಂಡಿಕ್ಕಿ ಹತ್ಯೆ ಮಾಡಿ ಬಳಿಕ ಯೋಗೇಶ್ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಪೊಲೀಸರು ಮಾಹಿತಿ ನೀಡಿದ್ದರು.



