ದಾವಣಗೆರೆ: ದನ ಮೈ ತೊಳೆಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವುದಾವಣಗೆರೆ: ದನ ಮೈ ತೊಳೆಯಲು ಚಾನಲ್ಗೆ ಹೋಗಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಸೊರಟೂರು ಗ್ರಾಮದ ಬಳಿ ನಡೆದಿದೆ.
ಮಂಜುನಾಥ್(26) ಮೃತ ಯುವಕ. ಚಾನಲ್ನಲ್ಲಿ ದನಗಳ ಮೈ ತೊಳೆಯಲು ಹೋಗಿದ್ದಾಗ ನೀರಿನಲ್ಲಿ ಮುಳುಗಿವ ಕೊನೆಯುಸಿರೆಳೆದಿದ್ದಾನೆ. ಮುಂಜುನಾಥ್ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ನೀರಿಗೆ ಹಾರಿ ಹೊರ ತೆಗೆದಿದು ಹೊನ್ನಾಳಿ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಅವರು ಮೃತನ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಈ ಕುರಿತು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.