ದಾವಣಗೆರೆ: ಗಣೇಶ ವಿಸರ್ಜನೆ ವೇಳೆ ಗೆಳೆಯರೊಂದಿಗೆ ನೃತ್ಯ ಮಾಡುವಾಗ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಇಂಜಿನಿಯರ್ ಗೆ ಹೃದಯಾಘಾತವಾಗಿ ಮೃತಪಟ್ಟ ಘಟನೆ ಜಗಳೂರಲ್ಲಿ ನಡೆದಿದೆ.
ನಿನ್ನೆ(ಸೆ.27) ರಾತ್ರಿ ಗಣೇಶ ವಿಸರ್ಜನೆಯ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಿದ್ದ ಮೆಕ್ಯಾನಿಕಲ್ ಎಂಜಿನಿಯರ್ ಆಗಿ ಖಾಸಗಿ ಕಂಪನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ನಾಗರಾಜ್ ಪತ್ತಾರ್ (30)ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಜಗಳೂರಿನ ಗಂಗಾಂಭಿಕ ಬಡಾವಣೆಯ ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆಯಲ್ಲಿ, ಗೆಳೆಯರೊಂದಿಗೆ ಮಹಾತ್ಮ ಗಾಂಧಿ ಸರ್ಕಲ್ ಬಳಿ ನೃತ್ಯ ಮಾಡುವಾಗ ಅಸ್ವಸ್ಥರಾಗಿದ್ದಾರೆ.
ತಕ್ಷಣವೇ ನಗರದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ಕೊಡಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗೆ ತೆರಳುವಂತೆ ಸೂಚಿಸಲಾಗಿದೆ. ಆದರೆ, ಅಲ್ಲಿಯೇ ಕುಸಿದು ಬಿದ್ದು ನಾಗರಾಜ್ ಸಾವನ್ನಪ್ಪಿದ್ದಾರೆ. ತಾಲ್ಲೂಕಿನ ರೇಷ್ಮೆ ಇಲಾಖೆ ಅಧಿಕಾರಿಯಾಗಿದ್ದ ನಾರಾಯಣ್ ಪತ್ತಾರ್ ಅವರ ಪುತ್ರರಾದ ನಾಗರಾಜ್ ಪತ್ತರ್ ವಿಂಡ್ ಮಿಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಮೂಲತಃ ಬಾಗಲಕೋಟೆ ಜಿಲ್ಲೆಯವರಾಗಿದ್ದು , ಕಳೆದ 25 ವರ್ಷಗಳಿಂದ ಜಗಳೂರಿನಲ್ಲಿ ವಾಸವಿದ್ದರು.
ದಾವಣಗೆರೆ: ರಾಶಿ ಅಡಿಕೆ ಬೆಲೆಯಲ್ಲಿ ದಿಢೀರ್ 2,800 ರೂ. ಏರಿಕೆ: ರೈತರ ಮುಖದಲ್ಲಿ ಸಂತಸ



