ದಾವಣಗೆರೆ: ಜಿಲ್ಲೆಯ ಚನ್ನಗಿರಿ ತಾಲೂಕಿನ ಸೂಳೆಕೆರೆಗೆ ಹಾರಿ ತಾಯಿ-ಮಗು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
5 ವರ್ಷದ ಮಗುವಿನೊಂದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ತಾಯಿ-ಮಗಳನ್ನು ಹೊನ್ನೆಬಾಗಿ ಗ್ರಾಮದವರು ಎಂದು ಗುರುತಿಸಲಾಗಿದೆ. ಹೊನ್ನೆಬಾಗಿ ಗ್ರಾಮದ ಕವಿತಾ (27) ಹಾಗೂ ಪುತ್ರಿ ನಿಹಾರಿಕ (5) ಮೃತಪಟ್ಟಿದ್ದಾರೆ. ಕಳೆದ ಶುಕ್ರವಾರದಿಂದ ಕವಿತಾ ಹಾಗೂ ಪುತ್ರಿ ನಿಹಾರಿಕ ಕಾಣೆಯಾಗಿರು. ಈ ಬಗ್ಗೆ ದೂರು ದಾಖಲಾಗಿತ್ತು. ಪತಿ ಮಂಜುನಾಥ್ ನಿಂದ ನಿರಂತರ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಕವಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.