ದಾವಣಗೆರೆ: ಜಮೀನಿನಲ್ಲಿ ಕೆಲಸ ಮಾಡುವಾಗ ವ್ಯಕ್ತಿಯೊಬ್ಬರ ಮೇಲೆ ಹೆಜ್ಜೇನು ದಾಳಿ ನಡೆಸಿದ್ದು, ತೀವ್ರ ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ದಾಳಿಗೆ ಒಳಗಾಗದ ವ್ಯಕ್ತಿ ಸಾವನ್ನಪ್ಪಿದ ಘಟನೆ ಚನ್ನಗಿರಿ ತಾಲೂಕಿನ ಗುರುಪುರ ಗ್ರಾಮದಲ್ಲಿ ನಡೆದಿದೆ.
ಚನ್ನಗಿರಿ ಪಟ್ಟಣದ ವಾಸಿ ಜಯಪ್ಪ (54) ಸಾವನ್ನಪ್ಪಿದರವರು. ಇತ್ತೀಚೆಗೆ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ಹೆಜ್ಜೇನು ದಾಳಿ ನಡೆಸಿತ್ತು. ಈ ವೇಳೆ ಅಸ್ವಸ್ಥಗೊಂಡಿದ್ದ ಜಯಪ್ಪ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚನ್ನಗಿರಿ ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಈ ಬಗ್ಗೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.