ದಾವಣಗೆರೆ: ಕೆರೆಯಲ್ಲಿ ಮೀನು ಹಿಡಿಯಲು ತೆರಳಿದ್ದ ವೇಳೆ ತೆಪ್ಪ ಮಗುಚಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ತುಪ್ಪದಹಳ್ಳಿ ಗ್ರಾಮದಲ್ಲಿ ಕೆರೆಯಲ್ಲಿ ನಡೆದಿದೆ.
40 ವರ್ಷದ ಮೂರ್ತಿ ಮೃತ ವ್ಯಕ್ತಿಯಾಗಿದ್ದು, ಕೆರೆಯಲ್ಲಿ ಮೀನು ಹಿಡಿದು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಎಂದಿನಂತೆ ಕೆರೆಯಲ್ಲಿ ತೆಪ್ಪದ ಮೂಲಕ ಮೀನು ಹಿಡಿಯಲು ಹೋಗಿದ್ದಾಗ ಈ ದುರಂತ ನಡೆದಿದೆ. ಮೀನಿಗೆ ಹಾಕಿದ್ದ ಬಲೆ ಕಾಲಿಗೆ ಸಿಲುಕಿ ನೀರಲ್ಲಿ ಈಜಲು ಸಾಧ್ಯವಾಗದೇ ಮುಳುಗಿ ಸಾವನ್ನಪ್ಪಿದ್ದಾರೆಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಬಿಳಚೋಡು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.



