ದಾವಣಗೆರೆ: ತೋಟದಲ್ಲಿ ತೆಂಗಿನ ಕಾಯಿ ಕೀಳಲು ಹೋದ ಯುವಕನಿಗೆ ವಿದ್ಯುತ್ ಶಾಕ್ ಹೊಡೆದಿದ್ದು, ಕಾಯಿ ಕೇಳುವ ದೋಟಿ ವಿದ್ಯುತ್ ಲೈನ್‌ಗೆ ತಗುಲಿ ಸಾವನ್ನಪ್ಪಿದ ಘಟನೆ ತಾಲ್ಲೂಕಿನ ರಾಮಗೊಂಡನಹಳ್ಳಿಯಲ್ಲಿ ನಡೆದಿದೆ
ತೋಟದಲ್ಲಿ ತೆಂಗಿನಕಾಯಿ ಕೀಳುವ ವೇಳೆ ವಿದ್ಯುತ್ ಲೈನ್‌ನಿಂದ ವಿದ್ಯುತ್ ಪ್ರವಹಿಸಿ ಯುವಕ ಹರೀಶ (32) ಮೃತ ದುರ್ದೈವಿ. ಹರೀಶ್ ಬೆಳಿಗ್ಗೆ ತಮ್ಮ ತೋಟದಲ್ಲಿ ತೆಂಗಿನ ಕಾಯಿ ಕೀಳಲು ಕಾರ್ಬನ್ ದೋಟಿ ತೆಗೆದುಕೊಂಡು ಹೋಗಿದ್ದರು. ಈ ವೇಳೆ ತೋಟದಲ್ಲಿ ಹಾದು ಹೋಗಿರುವ ವಿದ್ಯುತ್ ಲೈನ್‌ಗೆ ದೋಟಿ ತಗುಲಿದಾಗ ವಿದ್ಯುತ್ ಪ್ರವಹಿಸಿದೆ ಕೂಡಲೇ ಅವರನ್ನು ದಾವಣಗೆರೆ ಎಸ್‌ಎಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು ಆದರೆ, ಚಿಕಿತ್ಸೆ ಫಲಕಾರಿಯಾಗದೇ ಹರೀಶ್ ಮೃತಪಟ್ಟಿದ್ದಾನೆ.
ಮೃತ ತಂದೆ ರಂಗಪ್ಪ ಮಾಯಕೊಂಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.