ದಾವಣಗೆರೆ: ದೀನ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಪ್ರಸಕ್ತ ಸಾಲಿಗೆ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ, ವ್ಯಕ್ತಿಗತ ಉದ್ಯಮಶೀಲತೆ (ಸಾಲ ಮತ್ತು ಸಹಾಯಧನ). ಗುಂಪು ಉದ್ಯಮ ಕಾರ್ಯಕ್ರಮದಡಿ. ಗುಂಪು ಉದ್ಯಮ ಕೈಗೊಳ್ಳಲು, ಎಸ್.ಹೆಚ್.ಜಿ.ಬ್ಯಾಂಕ್ ಕ್ರೆಡಿಟ್ ಲಿಂಕೇಜ್ ಕಾರ್ಯಕ್ರಮದಡಿ ಸಾಲ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಕೌಶಲ್ಯಾಭಿವೃದ್ಧಿ ಮೂಲಕ ಉದ್ಯೋಗ ಮತ್ತು ಸ್ಥಳ ನಿಯುಕ್ತಿ ಕಾರ್ಯಕ್ರಮದಡಿ ವಿವಿಧ ತರಬೇತಿಯನ್ನು ಪಡೆಯಲು, ಮಹಿಳಾ ಸ್ವ ಸಹಾಯ ಸಂಘಗಳನ್ನು ರಚಿಸಲು, ಹಾಗೂ ಉದ್ಯೋಗದಲ್ಲಿ ತೊಡಗಿಸಿಕೊಂಡಿರುವವರು ಸಂಘವನ್ನು ರಚಿಸಲು ಆಸಕ್ತಿ ಹೊಂದಿದ ಅರ್ಹ ಫಲಾನುಭವಿಗಳಿಂದ, ಗುಂಪುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ನಿಗದಿತ ನಮೂನೆಗಳಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ. ಜೂನ್ 13 ರೊಳಗೆ ಕಚೇರಿಗೆ ಸಲ್ಲಿಸಬೇಕು. ಅರ್ಜಿಗಳನ್ನು ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ಸಂಬಂಧಪಟ್ಟ ಶಾಖೆಯಲ್ಲಿ ಮಾಹಿತಿ ಪಡೆಯಬಹುದೆಂದು ಹೊನ್ನಾಳಿ ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.



