ದಾವಣಗೆರೆ: ಜಿಲ್ಲಾ ಪಂಚಾಯತ್, ಎನ್.ಆರ್.ಎಲ್.ಎಂ ಸಂಜೀವಿನಿ, ಕೆ.ಎಸ್.ಆರ್.ಎಲ್.ಪಿ.ಎಸ್ ವತಿಯಿಂದ ನಾಳೆ (ಅಕ್ಟೋಬರ್ 30) ರಂದು ಬೆಳಿಗ್ಗೆ 10 ರಿಂದ ರಾತ್ರಿ 8 ಗಂಟೆಯವರೆಗೆ ಬಿ.ಎಸ್.ಚನ್ನಬಸಪ್ಪ & ಸನ್ಸ್ (ಎಕ್ಸ್ ಕ್ಲ್ಯೂಜಿವ್) ಬಟ್ಟೆ ಅಂಗಡಿ ಆವರಣ ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ದೀಪ ಸಂಜೀವಿನಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ದೀಪಾವಳಿ ಹಬ್ಬದ ಪ್ರಯುಕ್ತ ಗ್ರಾಮೀಣ ಭಾಗದ ಮಹಿಳಾ ಸ್ವ-ಸಹಾಯ ಸಂಘದವರು ತಯಾರಿಸಿದ ಮಣ್ಣಿನ ವಿವಿಧ ಬಗೆಯ ಹಣತೆಗಳು ಹಾಗೂ ಹಬ್ಬದ ವಿಶೇಷ ತಿಂಡಿ ತಿನಿಸುಗಳನ್ನು ಮಾರಾಟ ಮಾಡಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ದೀಪ ಸಂಜೀವಿನಿ ಮಳಿಗೆಗಳಿಗೆ ಭೇಟಿ ನೀಡಿ ಗ್ರಾಮೀಣ ಭಾಗದ ಮಹಿಳೆಯರಿಗೆ ಪ್ರೋತ್ಸಾಹ ನೀಡಬೇಕೆಂದು ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸುರೇಶ್.ಬಿ.ಇಟ್ನಾಳ್ ತಿಳಿಸಿದ್ದಾರೆ.



