Connect with us

Dvgsuddi Kannada | online news portal | Kannada news online

ದಾವಣಗೆರೆ: ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸಿ; 125 ಡೆಸಿಬಲ್ ಗಿಂತ ಮೇಲ್ಪಟ್ಟ ಪಟಾಕಿ ನಿಷೇಧ; ಡಿಸಿ

ದಾವಣಗೆರೆ

ದಾವಣಗೆರೆ: ಪರಿಸರ ಸ್ನೇಹಿ ದೀಪಾವಳಿ ಹಬ್ಬ ಆಚರಿಸಿ; 125 ಡೆಸಿಬಲ್ ಗಿಂತ ಮೇಲ್ಪಟ್ಟ ಪಟಾಕಿ ನಿಷೇಧ; ಡಿಸಿ

ದಾವಣಗೆರೆ: ದೀಪಾವಳಿ ಹಬ್ಬವನ್ನು ಜಿಲ್ಲೆಯಾದ್ಯಂತ ಸಡಗರದಿಂದ ಆಚರಿಸಲಾಗುತ್ತಿದ್ದು, ಹಬ್ಬದ ಸಂದರ್ಭದಲ್ಲಿ ಸಿಡಿಸುವ ಪಟಾಕಿಗಳು ಶಬ್ದ ಮಾಲಿನ್ಯ ಮತ್ತು ವಾಯು ಮಾಲಿನ್ಯ ಉಂಟು ಮಾಡಿ ಪರಿಸರಕ್ಕೆ ಹಾನಿ ಮಾಡುತ್ತಿದೆ. ಜೊತೆಗೆ ಜನರ ಆರೋಗ್ಯವನ್ನು ಹದಗೆಡಿಸುತ್ತಿದೆ. ಮತ್ತು ಪ್ರಾಣಿ-ಪಕ್ಷಿಗಳ ಕಲರವಕ್ಕೆ ಘಾಸಿ ಉಂಟುಮಾಡುತ್ತಿದೆ. ಆದ್ದರಿಂದ ದೀಪಾವಳಿ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಸರಳ ರೀತಿಯಲ್ಲಿ ಮಾಲಿನ್ಯ ರಹಿತವಾಗಿ ಮತ್ತು ಭಕ್ತಿ ಪೂರ್ವಕವಾಗಿ ಆಚರಿಸಲು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಮನವಿ ಮಾಡಿದ್ದಾರೆ.

ಮಾರಾಟ ಹಾಗೂ ಸಾರ್ವಜನಿಕರು ಹಸಿರು ಪಟಾಕಿ ಗುರುತಿಸುವಿಕೆ ಕ್ರಮಗಳು: ಪಟಾಕಿ ಬಾಕ್ಸ್ ಗಳ ಮೇಲೆ ಕೌನ್ಸಿಲ್ ಆಫ್ ಸೈಂಟಿಫಿಕ್ ಅಂಡ್ ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್‍ಐಆರ್) ಮತ್ತು ನ್ಯಾಷನಲ್ ಎನ್ವಿರಾಂಮೆಂಟಲ್ ಇಂಜಿನಿಯರಿಂಗ್ ರಿಸರ್ಚ್ ಇನ್ಸಿಟಿಟ್ಯೂಟ್ (ಎನ್‍ಇಇಆರ್‍ಐ) ಇವರ ಲೋಗೋ ಹಾಗೂ ನೊಂದಾಯಿತ ಸಂಖ್ಯೆಯೊಂದಿಗೆ ಮುದ್ರಿತವಾಗಿರಬೇಕು. ಅಧೀಕೃತ ಮಾರಾಟಗಾರರು ಸಂಬಂಧಪಟ್ಟ ಇಲಾಖೆ, ಪ್ರಾಧಿಕಾರದಿಂದ ನೀಡುವ ಪರವಾನಗಿಯಲ್ಲಿ ನಿಗದಿಪಡಿಸಿರುವ ದಿನಾಂಕ ಮತ್ತು ಸ್ಥಳಗಳಲ್ಲಿ ಮಾತ್ರ ತಾತ್ಕಾಲಿಕ ಪಟಾಕಿ ಅಂಗಡಿಗಳನ್ನು ಇಡಬೇಕು. ನಿಷೇಧಿತ ಪಟಾಕಿಗಳ ಮಾರಾಟ ಕಂಡುಬಂದಲ್ಲಿ ಅಂತಹ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗುವುದು ಮತ್ತು ನಿಯಮಗಳನ್ವಯ ಕಾನೂನು ಕ್ರಮಕೈಗೊಳ್ಳಲಾಗುವುದು.

ಹಣತೆ ದೀಪ ಹಚ್ಚುವ ಮೂಲಕ ಬೆಳಕಿನ ಹಬ್ಬ ದೀಪಾವಳಿಯನ್ನು ಪರಿಸರ ಸ್ನೇಹಿಯಾಗಿ ಆಚರಿಸೋಣ ಅಪಾರ್ಟ್‍ಮೆಂಟ್, ವಠಾರ, ನೆರೆಹೊರೆಯ ಮನೆಯವರು ಒಂದೆಡೆ ಕಲೆತು ಪರಿಸರ ಸ್ನೇಹಿ ದೀಪಾವಳಿ ಹಬ್ಬವನ್ನು ಆಚರಿಸಿ. ಹಬ್ಬದ ಆಚರಣೆಯಲ್ಲಿ ಬೆಳಕೇ ಪ್ರಧಾನವಾಗಿರಲಿ. ಗಿಡ, ಮರಗಳು ಮತ್ತು ಪ್ರಾಣಿ-ಪಕ್ಷಿಗಳಿಗೆ ಯಾವುದೇ ಹಾನಿಯಾದಂತೆ ಎಚ್ಚರವಹಿಸಿ. ಶಾಶ್ವತ ಕುರುಡತನ, ಕಿವುಡುತನಗಳಿಗೆ ಎಡೆಮಾಡಿಕೊಡದಿರಿ. ಪಟಾಕಿಗಳನ್ನು ಖರೀದಿಸುವ ಹಸಿರು ಪಟಾಕಿಗಳ ಲೇಬಲ್‍ಗಳನ್ನು ಪರಿಶೀಲಿಸಿ ಖರೀದಿಸಬೇಕು.

125 ಡೆಸಿಬಲ್ ಶಬ್ದಕ್ಕಿಂತಲೂ ಮೇಲ್ಪಟ್ಟ ಪಟಾಕಿಗಳ ಸಿಡಿಸುವುದನ್ನು ನಿಷೇಧಿಸಲಾಗಿದೆ. ಶಿಕ್ಷಣ ಸಂಸ್ಥೆ, ಆಸ್ಪತ್ರೆ ಮತ್ತು ವೃದ್ದಾಶ್ರಮಗಳಂತಹ ಸೂಕ್ಷ್ಮ ಪ್ರದೇಶಗಳ ಹತ್ತಿರ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಪಟಾಕಿಗಳ ಸಿಡಿತದ ನಂತರ ಉತ್ಪತ್ತಿಯಾಗುವ ಘನ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಎಸೆಯಬಾರದು. ಸ್ಥಳೀಯ ಸಂಸ್ಥೆಗಳು ನಿಗಧಿಪಡಿಸಿದ ಕಸವನ್ನು ವಿಲೇವಾರಿ ಮಾಡುವ ವಾಹನಗಳಿಗೆ ನೀಡತಕ್ಕದ್ದು. ಸರ್ವೋಚ್ಚ ನ್ಯಾಯಾಲಯವು ನೀಡಿದ ತೀರ್ಪಿನ ನಿರ್ದೇಶನದಂತೆ ಹಸಿರು ಪಟಾಕಿಯನ್ನು ಹೊರತುಪಡಿಸಿ ಇನ್ಯಾವುದೇ ಪಟಾಕಿಗಳನ್ನು ಹಬ್ಬದ ಸಮಯದಲ್ಲಿ ರಾತ್ರಿ 8.00 ಗಂಟೆಯಿಂದ 10.00 ವರೆಗೆ ಮಾತ್ರ ಪಟಾಕಿಗಳನ್ನು ಸ್ಪೋಟಿಸಲು ಅವಕಾಶ ನೀಡಿದ್ದು, ಉಳಿದ ಸಮಯದಲ್ಲಿ ಪಟಾಕಿಗಳ ಸ್ಪೋಟವನ್ನು ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top