ದಾವಣಗೆರೆ: ಪ್ರಸಕ್ತ ಸಾಲಿನ ಮೀನುಗಾರಿಕೆ ಇಲಾಖೆ ವತಿಯಿಂದ ರಾಜ್ಯವಲಯ ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆಗಳ ಯೋಜನೆಯಡಿ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.
- ವಾಹನ ಖರೀದಿಗೆ ಸಹಾಯಧನ
- ಸೆಪ್ಟೆಂಬರ್ 10 ಕೊನೆ ದಿನ
- ಗರಿಷ್ಠ ರೂ.3 ಲಕ್ಷ ಆರ್ಥಿಕ ನೆರವು
ಮೀನುಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ ರೂ.3 ಲಕ್ಷ ಆರ್ಥಿಕ ನೆರವು ನೀಡಲಾಗುವುದು. ಜಿಲ್ಲೆಗೆ ಪ.ಜಾತಿ-2 ಮತ್ತು ಪ.ಪಂಗಡ-1 ಗುರಿ ನಿಗದಿಪಡಿಸಲಾಗಿದೆ. ಅರ್ಜಿಯನ್ನು ಸೆಪ್ಟೆಂಬರ್ 10 ರೊಳಗಾಗಿ ಆಯಾ ತಾಲ್ಲೂಕಿನ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಸಬೇಕೆಂದು ಮೀನುಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.