ದಾವಣಗೆರೆ: ದಾವಣಗೆರೆ ವಾಲಿಬಾಲ್ ಅಸೋಸಿಯೇಷನ್ ವತಿಯಿಂದ ಏ.11 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಮಟ್ಟದ ಪುರುಷರ ವಾಲಿಬಾಲ್ ದೇವನಗರಿ ಕಪ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ. ಅಂದು ಬೆಳಗ್ಗೆ 9 ಗಂಟೆಗೆ ಎಸ್ಪಿ ಹನುಮಂತರಾಯ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ. ಮೇಯರ್ ಎಸ್. ಟಿ. ವೀರೇಶ್, ಡಿವೈಎಸ್ ಪಿ ನಾಗೇಶ್ ಯು ಐತಾಳ, ಅಸೋಸೊಯೇಷನ್ ಅಧ್ಯಕ್ಷ, ಮಾಜಿ ಮೇಯರ್ ಅಜಯ್ ಕುಮಾರ್, ಪಾಲಿಕೆ ವಿಪಕ್ಷ ನಾಯಕ ಎ. ನಾಗರಾಜ ಸೇರಿದಂತೆ ಮತ್ತಿತರರು ಭಾಗಿಯಾಗಲಿದ್ದಾರೆ. ಪ್ರಥಮ ಬಹುಮಾನ 10 ಸಾವಿರ, ದ್ವಿತೀಯ ಬಹುಮಾನ 6 ಸಾವಿರ ಹಾಗೂ ತೃತೀಯ ಬಹುಮಾನವಾಗಿ 5 ಸಾವಿರ , 4 ನೇ ಸ್ಥಾನಕ್ಕೆ 2 ಸಾವಿರ ನಗದು ಬಹುಮಾನ ಮತ್ತು ಟ್ರೋಫಿ ನೀಡೊಲಾಗುತ್ತಿದೆ. ಕ್ರೀಡಾಪಟುಗಳು ತಮ್ಮ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗೆ ಗುರುರಾಜ-9980769900, ಪ್ರಶಾಂತ್-7899914980 ಸಂಪರ್ಕಿಸಿ.