Connect with us

Dvgsuddi Kannada | online news portal | Kannada news online

ದಾವಣಗೆರೆ: ಇಂದು ಜಿಲ್ಲಾಡಳಿತದಿಂದ ದೇವರಾಜ ಅರಸು ಜನ್ಮದಿನಾಚರಣೆ

ದಾವಣಗೆರೆ

ದಾವಣಗೆರೆ: ಇಂದು ಜಿಲ್ಲಾಡಳಿತದಿಂದ ದೇವರಾಜ ಅರಸು ಜನ್ಮದಿನಾಚರಣೆ

ದಾವಣಗೆರೆ: ಇಂದು (ಆ.20) ಬೆಳಿಗ್ಗೆ 11 ಗಂಟೆಗೆ ಜಿಲ್ಲಾಡಳಿತ ಭವನದ ತುಂಗಭದ್ರಾ ಸಭಾಂಗಣದಲ್ಲಿ ಸಾಮಾಜಿಕ ಪರಿವರ್ತನೆಯ ಹರಿಕಾರ, ಹಿಂದುಳಿದ ವರ್ಗಗಳ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರ 107ನೇ ಜನ್ಮದಿನಾಚರಣೆಯನ್ನು ಏರ್ಪಡಿಸಲಾಗಿದೆ.

ಜಿಲ್ಲಾ ಪಂಚಾಯತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ದಾವಣಗೆರೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮವನ್ನು ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಕಾರ್ಯಕ್ರಮದ ಉದ್ಘಾಟನೆ ನೆರೆವೇರಿಸುವರು. ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಎ. ರವೀಂದ್ರನಾಥ್ ಅಧ್ಯಕ್ಷತೆ ವಹಿಸುವರು.

ಸಂಸದ ಡಾ;ಜಿ.ಎಂ.ಸಿದ್ದೇಶ್ವರ, ಚನ್ನಗಿರಿ ಕ್ಷೇತ್ರದ ಶಾಸಕರು ಹಾಗೂ ಸಾಬೂನು ಮತ್ತು ಮಾರ್ಜಕ ನಿಯಮಿತದ ಅಧ್ಯಕ್ಷ ಕೆ.ಮಾಡಾಳ್ ವಿರೂಪಾಕ್ಷಪ್ಪ, ಹೊನ್ನಾಳಿ ಕ್ಷೇತ್ರದ ಶಾಸಕರು ಹಾಗೂ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ ರೇಣುಕಾಚಾರ್ಯ,ಜಗಳೂರು ಕ್ಷೇತ್ರದ ಶಾಸಕರು ಹಾಗೂ ಮಹರ್ಷಿ ವಾಲ್ಮೀಕಿ ಪ.ಪಂ ಅಭಿವೃದ್ದಿ ನಿಗಮದ ಅಧ್ಯಕ್ಷ ಎಸ್.ವಿ ರಾಮಚಂದ್ರ, ಕರ್ನಾಟಕ ವಿಧಾನ ಪರಿಷತ್ ಸರ್ಕಾರಿ ಮುಖ್ಯ ಸಚೇತಕರಾದ ಡಾ.ವೈ.ಎ ನಾರಾಯಣಸ್ವಾಮಿ, ಮಾಯಕೊಂಡ ಕ್ಷೇತ್ರದ ಶಾಸಕರು ಹಾಗೂ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಪ್ರೊ.ಲಿಂಗಣ್ಣ ಇವರ ಗೌರವ ಉಪಸ್ಥಿತಿ ಇರಲಿದೆ.

ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಡಾ.ಶಾಮನೂರು ಶಿವಶಂಕರಪ್ಪ, ಎಸ್. ರಾಮಪ್ಪ, ವಿಧಾನ ಪರಿಷತ್ ಶಾಸಕರಾದ ಮೋಹನ್ ಕುಮಾರ್ ಕೊಂಡಜ್ಜಿ, ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್.ಎನ್, ಡಾ. ತೇಜಸ್ವಿನಿಗೌಡ, ಆಯನೂರು ಮಂಜುನಾಥ್, ಎಸ್.ಎಲ್.ಭೋಜೇಗೌಡ, ಆರ್.ಶಂಕರ್, ಚಿದಾನಂದ.ಎಂ.ಗೌಡ, ಡಿ.ಎಸ್.ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್, ಸಮಾಜ ಕಲ್ಯಾಣ ಇಲಾಖೆಯ ಕೇಂದ್ರ ಪರಿಹಾರ ಸಮಿತಿಯ ಅಧ್ಯಕ್ಷ ಬಸವರಾಜ ನಾಯ್ಕ, ಮಹಾನಗರಪಾಲಿಕೆ ಮಹಾಪೌರರಾದ ಆರ್.ಜಯಮ್ಮ ಗೋಪಿನಾಯ್ಕ, ದೂಡಾ ಅಧ್ಯಕ್ಷ ಕೆ.ಎಂ.ಸುರೇಶ, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಚನ್ನಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ನೋಡಲ್ ಅಧಿಕಾರಿ ಬಿ.ಎಸ್ ಪ್ರದೀಪ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಆರ್.ಬಿ ಮದರಿ ಪಾಲ್ಗೊಳ್ಳುವರು. ಬೆಳಿಗ್ಗೆ 09 ಗಂಟೆಗೆ ನಗರದ ದೇವರಾಜ ಅರಸು ಪ್ರತಿಮೆ ಸ್ಥಳದಿಂದ(ಬಿ,ಎಸ್,ಎನ್.ಎಲ್. ಸರ್ಕಲ್) ಜಿಲ್ಲಾಡಳಿತ ಭವನ ತುಂಗಭದ್ರಾ ಸಭಾಂಗಣದವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top