ದಾವಣಗೆರೆ: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಯೋಜನೆಗಳಡಿ ಸಹಾಯಧನ ಮತ್ತು ಸಾಲ ಸೌಲಭ್ಯ ಪಡೆಯಲು ಸೇವಾ ಸಿಂಧು ತಂತ್ರಾಂಶದ ಮುಖಾಂತರ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿಗೆ, ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಮಡಿವಾಳ, ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯ, ಒಕ್ಕಲಿಗ, ಲಿಂಗಾಯುತ, ಕಾಡುಗೊಲ್ಲ, ಹಟ್ಟಿ ಗೊಲ್ಲ, ಮರಾಠ ಮತ್ತು ಇವರ ಉಪ ಸಮುದಾಯಗಳನ್ನು ಹೊರತುಪಡಿಸಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿನಲ್ಲಿ ಉಳಿದ ಸಮುದಾಯಗಳ ಅಭಿವೃದ್ಧಿಗಾಗಿ ವಿವಿಧ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ವೈಯಕ್ತಿಕ ಸಾಲ, ಗಂಗಾ ಕಲ್ಯಾಣ ನೀರಾವರಿ, ಅರಿವು-ಶೈಕ್ಷಣಿಕ ಸಾಲ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ, ಸ್ವಾವಲಂಬಿ ಸಾರಥಿ, ಬ್ಯಾಂಕುಗಳ ಸಹಯೋಗದೊಂದಿಗೆ ಸ್ವಯಂ ಉದ್ಯೋಗ ಸಾಲ. ಸ್ವಾತಂತ್ರ್ಯ ಅಮೃತ ಮಹೋತ್ಸವ ಮುನ್ನಡೆ ಯೋಜನೆಗಳಿಗೆ ಸೇವಾ ಸಿಂಧು ತಂತ್ರಾಂಶದಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಕ್ಟೋಬರ್ 31 ಅರ್ಜಿ ಸಲ್ಲಿಸಲು ಕೊನೆಯ ದಿನ.
ಹೆಚ್ಚಿನ ಮಾಹಿತಿಯನ್ನು ನಿಗಮದ ವೆಬ್‍ಸೈಟ್ www.dbcdc.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರು ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ದಾವಣಗೆರೆ ದೂ.ಸಂ 08192-230934 ಸಂಪರ್ಕಿಸಬಹುದು. ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕ ಸಾತ್ವಿಕ ತಿಳಿಸಿದ್ದಾರೆ.



