ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ (ಧೂಡಾ) ದ ಅಗತ್ಯ ಮೂಲ ಸೌಲಭ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗುವುದು ಎಂದು ನೂತನ ಧೂಡಾ ಅಧ್ಯಕ್ಷ ಕೆ.ಎಂ ಸುರೇಶ್ ಹೆಳಿದರು.
ಧೂಡಾ ಕಚೇರಿಯಲ್ಲಿ ಆಯೋಜಿಸಿದ್ದ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು, ಜನರ ಸಮಸ್ಯೆಗಳ ಬಗ್ಗೆ ಅರಿವಿದ್ದು, ಧೂಡಾವನ್ನು ಜನಸ್ನೇಹಿಯನ್ನಾಗಿ ಮಾಡುವ ಮೂಲಕ ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ನಾನು ಬಿಜೆಪಿಯಲ್ಲಿ ಕಳೆದ 22 ವರ್ಷದಿಂದ ಸಕ್ರಿಯವಾಗಿದ್ದು, ಪಕ್ಷ ನೀಡಿದ ಜವಾಬ್ದಾರಿಯನ್ನು ಸಮರ್ಥವಾಗಿ ನಿರ್ವಹಿಸಿದ್ದೇನೆ. ಇದೀಗ ನನ್ನ ಸೇವೆ ಗುರುತಿಸಿ ದೂಢಾ ಅಧ್ಯಕ್ಷ ಸ್ಥಾನದ ಜವಾಬ್ದಾರಿ ನೀಡಲಾಗಿದೆ ಎಂದರು



