ದಾವಣಗೆರೆ; ಗರ್ಭಿಣಿಯೊಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ಕರೆತರುವ ಮಾರ್ಗಮಧ್ಯೆ ಆಂಬುಲೆನ್ಸ್ನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ.
ಜಿಲ್ಲೆಯ ಹರಿಹರ ಪಟ್ಟಣದ ಜೈ ಭೀಮನಗರ ವಾಸಿ ಅಕ್ಕಮ್ಮ ಹೆರಿಗೆ ನೋವಿನಿಂದ ಬಳಲುತ್ತಿದ್ದರು. ಆಗ ಹರಿಹರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಥಮ ಚಿಕಿತ್ಸೆ ನೀಡಿದ ವೈದ್ಯರು, ಮೊದಲ ಹೆರಿಗೆ ಸಿಜೇರಿಯನ್ ಆಗಿರುವುದರಿಂದ ಸಹಜ ಹೆರಿಗೆ ಕಷ್ಟ. ಹೀಗಾಗಿ ನೀವು ಜಿಲ್ಲಾ ಆಸ್ಪತ್ರೆಗೆ ಕೂಡಲೇ ತೆರಳುವಂತೆ ಸೂಚಿಸಿದ್ದರು.
ಆಗ ಅಕ್ಕಮ್ಮ ಅವರನ್ನು 108 ಆಂಬುಲೆನ್ಸ್ನಲ್ಲಿ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದಾಗ ಮಾರ್ಗ ಮಧ್ಯೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಆಂಬುಲೆನ್ಸ್ ಸಿಬ್ಬಂದಿ ವಾಹನದಲ್ಲೇ ಹೆರಿಗೆ ಮಾಡಿಸಿದ್ದಾರೆ. ನಂತರ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ. ಇಲ್ಲಿ ಆಂಬುಲೆನ್ಸ್ ಸಿಬ್ಬಂದಿ ಕಾರ್ಯ ಶ್ಲಾಘನೀಯವಾಗಿದೆ.



