Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾ ಆಸ್ಪತ್ರೆಗೆ ಕರೆತರುವ ಮಾರ್ಗ ಮಧ್ಯೆ ಆಂಬುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

IMG 20230709 065323

ದಾವಣಗೆರೆ

ದಾವಣಗೆರೆ: ಜಿಲ್ಲಾ ಆಸ್ಪತ್ರೆಗೆ ಕರೆತರುವ ಮಾರ್ಗ ಮಧ್ಯೆ ಆಂಬುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ದಾವಣಗೆರೆ; ಗರ್ಭಿಣಿಯೊಬ್ಬರನ್ನು ಜಿಲ್ಲಾ ಆಸ್ಪತ್ರೆಗೆ ಕರೆತರುವ ಮಾರ್ಗಮಧ್ಯೆ ಆಂಬುಲೆನ್ಸ್‌ನಲ್ಲೇ ಮಗುವಿಗೆ ಜನ್ಮ ನೀಡಿದ್ದಾರೆ.

ಜಿಲ್ಲೆಯ ಹರಿಹರ ಪಟ್ಟಣದ ಜೈ ಭೀಮನಗರ ವಾಸಿ ಅಕ್ಕಮ್ಮ ಹೆರಿಗೆ ನೋವಿನಿಂದ ಬಳಲುತ್ತಿದ್ದರು. ಆಗ ಹರಿಹರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪ್ರಥಮ ಚಿಕಿತ್ಸೆ ನೀಡಿದ ವೈದ್ಯರು, ಮೊದಲ ಹೆರಿಗೆ ಸಿಜೇರಿಯನ್ ಆಗಿರುವುದರಿಂದ ಸಹಜ ಹೆರಿಗೆ ಕಷ್ಟ. ಹೀಗಾಗಿ ನೀವು ಜಿಲ್ಲಾ ಆಸ್ಪತ್ರೆಗೆ ಕೂಡಲೇ ತೆರಳುವಂತೆ ಸೂಚಿಸಿದ್ದರು.

ಆಗ ಅಕ್ಕಮ್ಮ ಅವರನ್ನು 108 ಆಂಬುಲೆನ್ಸ್‌ನಲ್ಲಿ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬರುತ್ತಿದ್ದಾಗ ಮಾರ್ಗ ಮಧ್ಯೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ ಆಂಬುಲೆನ್ಸ್‌ ಸಿಬ್ಬಂದಿ ವಾಹನದಲ್ಲೇ ಹೆರಿಗೆ ಮಾಡಿಸಿದ್ದಾರೆ. ನಂತರ ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದು, ತಾಯಿ ಮಗು ಆರೋಗ್ಯವಾಗಿದ್ದಾರೆ.‌ ಇಲ್ಲಿ ಆಂಬುಲೆನ್ಸ್  ಸಿಬ್ಬಂದಿ ಕಾರ್ಯ ಶ್ಲಾಘನೀಯವಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top