ದಾವಣಗೆರೆ: ಜಿಲ್ಲಾಸ್ಪತ್ರೆಗೆ 15 ಕೋಟಿ ವೆಚ್ಚದ ಎಂಆರ್ ಐ ಸ್ಕ್ಯಾನಿಂಗ್ ಮಷಿನ್ ಮಂಜೂರಾಗಿದೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ತಿಳಿಸಿದ್ದಾರೆ.
ಜಿಲ್ಲಾ ಆಸ್ಪತ್ರೆಯಲ್ಲಿ ಒಂದು ಸಾವಿರ ಬೆಡ್ ಗಳಿದ್ದು, ದಾವಣಗೆರೆ, ಚಿತ್ರದುರ್ಗ, ಹಾವೇರಿಯಿಂದ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಬಂದಂತಹ ಬಡ ರೋಗಿಗಳಿಗೆ ಎಂಆರ್ ಐ ಸ್ಕ್ಯಾನಿಂಗ್ ಸೌಲಭ್ಯ ಸಿಗದೆ ತೊಂದರೆ ಅನುಭವಿಸುತ್ತಿದ್ದರು. ಈ ಬಗ್ಗೆ ಸಂಸದ ಜಿಎಂ ಸಿದ್ದೇಶ ಅವರು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಕೆ.ಸುಧಾಕರ್ ಅವರನ್ನು ಭೇಟಿ ಮಾಡಿ ಎಂಆರ್ ಐ ಸ್ಕ್ಯಾನಿಂಗ್ ಮಂಜೂರು ಮಾಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಸರ್ಕಾರ ಶೀಘ್ರವೇ ಎಂಆರ್ ಐ ಸ್ಕ್ಯಾನಿಂಗ್ ಸ್ಥಾಪಿಸಲಾಗುವುದು ಎಂದು ಭರವಸೆ ನೀಡಿದೆ.