ದಾವಣಗೆರೆ: ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರು ಮೇ 7 ರ ಶುಕ್ರವಾರದಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಮೇ 7 ರ ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿನಿಂದ ಹೊರಟು ಬೆಳಿಗ್ಗೆ 9.30 ಕ್ಕೆ ದಾವಣಗೆರೆಯ ಪ್ರವಾಸಿ ಮಂದಿರಕ್ಕೆ ಆಗಮಿಸುವರು. ಬೆಳಿಗ್ಗೆ 10 ರಿಂದ 12 ಗಂಟೆವರೆಗೆ ಕೋವಿಡ್-19 ನಿಯಂತ್ರಣದ ಕುರಿತು ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲೆಯ ಜನಪ್ರತಿನಿಧಿಗಳ ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಜಿಲ್ಲಾಡಳಿತ ಭವನದ ತುಂಗಭದ್ರ ಸಭಾಂಗಣದಲ್ಲಿ ಸಭೆ ನಡೆಸುವರು. ಮಧ್ಯಾಹ್ನ 1 ಗಂಟೆಗೆ ದಾವಣಗೆರೆಯಿಂದ ನಿರ್ಗಮಿಸಿ ಮಧ್ಯಾಹ್ನ 4.30 ಕ್ಕೆ ಬೆಂಗಳೂರು ತಲುಪುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಸಿ.ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



