ದಾವಣಗೆರೆ: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಹಾಗೂ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಭೈರತಿ ಬಸವರಾಜ ಅವರು ನ. 16 ರಂದು ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಸಚಿವರು ಬೆಳಿಗ್ಗೆ 6 ಗಂಟೆಗೆ ಬೆಂಗಳೂರಿನಿಂದ ಹೊರಟು ಬೆಳಗ್ಗೆ 9 ಗಂಟೆಗೆ ದಾವಣಗೆರೆಯ ಪ್ರವಾಸಿ ಮಂದಿರಕ್ಕೆ ಆಗಮಿಸುವರು. ಬೆಳಿಗ್ಗೆ 11 ಗಂಟೆಗೆ ಶಾಮನೂರು ರಸ್ತೆಯಲ್ಲಿರುವ ಬಾಪೂಜಿ ಬ್ಯಾಂಕು ಸಮುದಾಯ ಭವನ ಇಲ್ಲಿ ಏರ್ಪಡಿಸಲಾಗಿರುವ 67ನೇ ಅಖಿಲ ಭಾರತ ಸಹಕಾರ ಸಪ್ತಾಹದ ‘ಅಂತರ್ಜಾಲ ಸಂಪರ್ಕದ ಮೂಲಕ ಸಹಕಾರ ಶಿಕ್ಷಣ ತರಬೇತಿಯ ಪುನರ್‍ಮನನ’ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಧ್ಯಾಹ್ನ 2.30 ಕ್ಕೆ ದಾವಣಗೆರೆಯಿಂದ ನಿಗರ್ಮಿಸುವರು ಎಂದು ಪ್ರಕಟಣೆ ತಿಳಿಸಿದೆ.



