ದಾವಣಗೆರೆ: ನಗರಾಭಿವೃದ್ಧಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ ಅವರು ಏ.21( ಬುಧವಾರ) ರಂದು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಅಂದು ಬೆಳಗ್ಗೆ10 ಗಂಟೆಗೆ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಹಾಗೂ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ ತುಂಗಭದ್ರಾ ಸಭಾಂಗಣದಲ್ಲಿ ಕೋವಿಡ್-19 ನಿಯಂತ್ರಣದ ಕುರಿತು ಕೈಗೊಳ್ಳಲಾಗಿರುವ ಹಾಗೂ ಕೈಗೊಳ್ಳಬೇಕಾಗಿರುವ ಮುಂಜಾಗ್ರತಾ ಕ್ರಮಗಳ ಕುರಿತು ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ಮತ್ತು ಜಿಲ್ಲೆಯ ಕಾರ್ಯಕ್ರಮಗಳ ಅನುಷ್ಠಾನ ಬಗ್ಗೆ ಚರ್ಚೆ ನಡೆಸುವರು. ಸಚಿವರು ಅದೇ ದಿನ ಮಧ್ಯಾಹ್ನ 2.30 ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.



