Connect with us

Dvgsuddi Kannada | online news portal | Kannada news online

ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರ ಮೂರು ದಿನ ಜಿಲ್ಲಾ ಪ್ರವಾಸ

ಪ್ರಮುಖ ಸುದ್ದಿ

ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರ ಮೂರು ದಿನ ಜಿಲ್ಲಾ ಪ್ರವಾಸ

ದಾವಣಗೆರೆ : ನಗರಾಭಿವೃದ್ದಿ ಹಾಗೂ ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎ.ಬಸವರಾಜ ಅವರು  ಜ.10, 11 ಮತ್ತು 12 ರಂದು ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.

ಜ.10 ರಂದು ಬೆಳಿಗ್ಗೆ 10.30ಕ್ಕೆ ಹೊನ್ನಾಳಿ ಪ್ರವಾಸಿ ಮಂದಿರಕ್ಕೆ ಆಗಮಿಸುವರು. ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕಿನ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಭಾ.ಜ.ಪಾ ಬೆಂಬಲಿತ ಚುನಾಯಿತ ಸದಸ್ಯರು ಹಾಗೂ ಪರಾಜಿತ ಅಭ್ಯರ್ಥಿಗಳಿಗೆ ಹೊನ್ನಾಳಿಯ ಮೈದಾನದಲ್ಲಿ ಅಭಿನಂದನಾ ಸಮಾರಂಭ ಮತ್ತು ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 3 ಗಂಟೆಗೆ ದಾವಣಗೆರೆ ಪ್ರವಾಸಿ ಮಂದಿರಕ್ಕೆ ಆಗಮಿಸುವರು. ಮಧ್ಯಾಹ್ನ 3 ರಿಂದ 5 ಗಂಟೆವರೆಗೆ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಹಿರಿಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವರು ಹಾಗೂ ಅಲ್ಲಿಯೇ ವಾಸ್ತವ್ಯ ಮಾಡುವರು.

ಜ.11 ರ ಬೆಳಿಗ್ಗೆ 7 ರಿಂದ 9 ಗಂಟೆವರೆಗೆ ದಾವಣಗೆರೆ ಮಹಾನಗರಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ, ನಗರಾಭಿವೃದ್ದಿ ಪ್ರಾಧಿಕಾರ ಮತ್ತು ಕ.ನ.ನೀ.ಸ& ಒ.ಚ ಮಂಡಳಿ ಮತ್ತು ಕೆಯುಐಡಿಎಫ್‍ಸಿ ವ್ಯಾಪ್ತಿಯ ಅಭಿವೃದ್ದಿ ಕಾಮಗಾರಿಗಳನ್ನು ವೀಕ್ಷಣೆ ಮಾಡುವರು. ಬೆಳಿಗ್ಗೆ 10.30 ರಿಂದ 11.30 ರವರೆಗೆ ಮಹಾನಗರಪಾಲಿಕೆ ಸಭಾಂಗಣದಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿಗಳ ಕುರಿತು ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 12.30 ರವರೆಗೆ ಪಾಲಿಕೆ ಸಭಾಂಗಣದಲ್ಲಿ ಪಾಲಿಕೆಯ ಅಭಿವೃದ್ದಿ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಳ್ಳುವರು. ಮಧ್ಯಾಹ್ನ 12.30 ರಿಂದ ಮಧ್ಯಾಹ್ನ 1.30 ರವರೆಗೆ ಕೆಯುಐಡಿಎಫ್‍ಸಿ ಮತ್ತು ಕ.ನ.ನೀ.ಸ &ಒ.ಚ ಮಂಡಳಿ ಕಾಮಗಾರಿಗಳ ಕುರಿತು ಪ್ರಗತಿ ಪರಿಶೀಲನೆ ಸಭೆಯಲ್ಲಿ ಪಾಲ್ಗೊಂಡು, ಮಧ್ಯಾಹ್ನ 3 ರಿಂದ ಸಂಜೆ 4.30 ರವರೆಗೆ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪಾರ್ಟಿಯ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ಅಂದು ದಾವಣಗೆರೆಯಲ್ಲಿ ವಾಸ್ತವ್ಯ ಮಾಡುವರು.

ಜ.12 ರ ಬೆಳಿಗ್ಗೆ ದಾವಣಗೆರೆಯಿಂದ ನಿರ್ಗಮಿಸಿ, 8.30 ಕ್ಕೆ ಹೊನ್ನಾಳಿ ಪ್ರವಾಸಿ ಮಂದಿರಕ್ಕೆ ಆಗಮಿಸುವರು. ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 12 ಗಂಟೆಯವರೆಎ ಹೊನ್ನಾಳಿಯಲ್ಲಿ ಆಯೋಜಿಸಲಾಗಿರುವ ‘ರೈತರೊಂದಿಗೆ ಒಂದು ದಿನ’ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮಧ್ಯಾಹ್ನ 12 ಗಂಟೆಗೆ ಹೊನ್ನಾಳಿಯಿಂದ ನಿರ್ಗಮಿಸುವರೆಂದು ಸಚಿವರ ಆಪ್ತಕಾರ್ಯದರ್ಶಿ ಸಿ.ನಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top
(adsbygoogle = window.adsbygoogle || []).push({});