ದಾವಣಗೆರೆ: ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರು ಇಂದು (ಜು.07) ದಾವಣಗೆರೆ ಜಿಲ್ಲಾ ಪೊಲೀಸ್ ಕಚೇರಿಗೆ ಭೇಟಿ ನೀಡಿ, ಸಾರ್ವಜನಿಕರೊಂದಿಗೆ ಕುಂದುಕೊರತೆ ಕುರಿತು ಚರ್ಚೆ ನಡೆಸಲಿದ್ದಾರೆ.
ಇಂದು (ಜು.07) ಸಂಜೆ 05.30 ಕ್ಕೆ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಸಾರ್ವಜನಿಕರೊಂದಿಗೆ ಚರ್ಚೆ(interaction) ನಡೆಸಲಿದ್ದಾರೆ. ಭೇಟಿ ಮಾಡಲು ಆಗಮಿಸುವ ಸಾರ್ವಜನಿಕರು ಸಂಜೆ ಸರಿಯಾಗಿ 05.30 ಕ್ಕೆ ಆಗಮಿಸಬೇಕು ಎಂದು ಜಿಲ್ಲಾ ಪೊಲೀಸ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.