Connect with us

Dvgsuddi Kannada | online news portal | Kannada news online

ದಾವಣಗೆರೆ: ಅಪಘಾತ ತಗ್ಗಿಸಲು ಜಿಲ್ಲಾ ರಸ್ತೆಗಳ ರಿಪೇರಿ; ಆಟೋಗಳಿಗೆ ಮೀಟರ್‍, ಚಾಲಕನ ಸಂಪೂರ್ಣ ಮಾಹಿತಿ ಕಡ್ಡಾಯ: ಜಿಲ್ಲಾಧಿಕಾರಿ

ದಾವಣಗೆರೆ

ದಾವಣಗೆರೆ: ಅಪಘಾತ ತಗ್ಗಿಸಲು ಜಿಲ್ಲಾ ರಸ್ತೆಗಳ ರಿಪೇರಿ; ಆಟೋಗಳಿಗೆ ಮೀಟರ್‍, ಚಾಲಕನ ಸಂಪೂರ್ಣ ಮಾಹಿತಿ ಕಡ್ಡಾಯ: ಜಿಲ್ಲಾಧಿಕಾರಿ

ದಾವಣಗೆರೆ: ಅಪಘಾತಗಳ ಪ್ರಮಾಣವನ್ನು ಗಣನೀಯ ಪ್ರಮಾಣದಲ್ಲಿ ತಗ್ಗಿಸಲು ಜಿಲ್ಲೆಯಲ್ಲಿನ ರಸ್ತೆಗಳ ದುರಸ್ತಿ, ಸುಧಾರಣೆಗೆ ಅವಶ್ಯಕ ಕ್ರಮಗಳನ್ನು ಕೈಗೊಳ್ಳಬೇಕು. ಇದಲ್ಲದೆ, ನಗರದಲ್ಲಿ ಆಟೋಗಳಿಗೆ ಮೀಟರ್‍, ಸೀಟ್ ಹಿಂಭಾಗದಲ್ಲಿ ಚಾಲಕನ ಸಂಪೂರ್ಣ ಮಾಹಿತಿ ಕಡ್ಡಾಯಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಎಂ.ಜಿ. ಅಧಿಕಾರಿಗಳಿಗೆ ಸೂಚಿಸಿದರು.

  • ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ
  • ರಸ್ತೆಗಳಲ್ಲಿ ಅವೈಜ್ಞಾನಿಕ ತಡೆಗಳಿಂದ ಅಪಘಾತ
  • ವೈಜ್ಞಾನಿಕ ವೇಗ ತಡೆಗಳಿಗೆ ಥರ್ಮೋಪ್ಲಾಸ್ಟಿಕ್ ಬಣ್ಣ, ವೇಗ ತಡೆಗೆ ರೋಡ್ ಸ್ಟಡ್‍, ಸೂಚನಾ ಫಲಕ ಅಳವಡಿಸಲು ಸೂಚನೆ
  • ಆಟೋಗಳಿಗೆ ಮೀಟರ್‍ , ಸೀಟ್ ಹಿಂಭಾಗ ಚಾಲಕನ ಸಂಪೂರ್ಣ ಮಾಹಿತಿ ಕಡ್ಡಾಯ
  • ಅನಧಿಕೃತ ಆಟೋ ಸ್ಟಾಂಡ್‍ ತೆರವುಗೊಳಿಸಿ

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ. ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಗಳು, ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ಅಳವಡಿಸಲಾಗಿರುವ ತಡೆಗಳಿಂದ ಅಪಘಾತಗಳು ಸಂಭವಿಸುತ್ತಿರುವ ಹಿನ್ನಲೆಯಲ್ಲಿ ಅಂತಹ ಸ್ಥಳಗಳನ್ನು ಗುರುತಿಸಿ ಕೂಡಲೇ ತೆರವುಗೊಳಿಸಿ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಗೂ ಆಯಾ ಪೊಲೀಸ್ ಠಾಣೆಯ ಅಧಿಕಾರಿಗಳೊಂದಿಗೆ ಜಂಟಿ ಪರಿವೀಕ್ಷಣೆಯನ್ನು ಮಾಡಿ ಅವಶ್ಯಕತೆ ಇದ್ದರೆ, ವೈಜ್ಞಾನಿಕ ವೇಗತಡೆಗಳನ್ನು ಅಳವಡಿಸಿ ಸೂಕ್ತ ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸಬೇಕು ಎಂದರು.

ಜಿಲ್ಲಾ ವ್ಯಾಪ್ತಿಯಲ್ಲಿ ವೈಜ್ಞಾನಿಕ ವೇಗ ತಡೆಗಳಿಗೆ ಥರ್ಮೋಪ್ಲಾಸ್ಟಿಕ್ ಬಣ್ಣವನ್ನು ಅಳವಡಿಸುವುದರ ಜೊತೆಗೆ ವೇಗತಡೆ ಗೋಚರಿಸುವಂತೆ ರೋಡ್ ಸ್ಟಡ್‍ಗಳನ್ನು ಅಳವಡಿಸುವುದು ಮತ್ತು ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ತಿಳಿಸಿದರು.

ಜಿಲ್ಲಾ ವ್ಯಾಪ್ತಿಯ ತಾಲೂಕು ಕೇಂದ್ರಗಳಿಂದ ಜಿಲ್ಲಾ ಕೇಂದ್ರಗಳಿಗೆ ಸಂಪರ್ಕಿಸುವ ಎಲ್ಲಾ ರಾಜ್ಯ ಹೆದ್ದಾರಿಗಳು ಮತ್ತು ಜಿಲ್ಲಾ ಮುಖ್ಯ ರಸ್ತೆಗಳಲ್ಲಿ ಹೆಚ್ಚು ಮಳೆಯಾದ ಪರಿಣಾಮ ರಸ್ತೆಗಳು ಕಿತ್ತು ಹೋಗಿರುವುದು ಹಾಗೂ ಕೆಲವು ಸ್ಥಳಗಳಲ್ಲಿ ಗುಂಡಿಗಳು ಸಹ ನಿರ್ಮಾಣವಾಗಿದ್ದು. ಇದರಿಂದ ರಸ್ತೆ ಬಳಕೆದಾರರಾದ ಅದರಲ್ಲೂ ದ್ವಿಚಕ್ರ ವಾಹನ ಸವಾರರು ಹೆಚ್ಚಾಗಿ ಲಘು ಅಪಘಾತಗಳು, ಇಲ್ಲವೇ ಮಾರಣಾಂತಿಕ ಅಪಘಾತಗಳು ಅಗುವುದಕ್ಕೆ ಕಾರಣವಾಗಿರುತ್ತದೆ. ಆದ್ದರಿಂದ ಸಂಬಂಧಪಟ್ಟ ಆಯಾ ತಾಲೂಕು ಮಟ್ಟದ ಅಧಿಕಾರಿಗಳು ಸ್ಥಳ ಪರಿಶೀಲನೆ ಮಾಡಿ ಅಗತ್ಯ ರಸ್ತೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದು ಎಂದು ತಿಳಿಸಿದರು.

ಮೀಟರ್‍ , ಚಾಲಕನ ಸಂಪೂರ್ಣ ಮಾಹಿತಿ ಕಡ್ಡಾಯ: ನಗರದಲ್ಲಿ ಸಂಚರಿಸುವ ಆಟೋರಿಕ್ಷಾ ವಾಹನಗಳಿಗೆ ಕಡ್ಡಾಯವಾಗಿ ಬಾಡಿಗೆ ದರ ಪಡೆಯಲು ಮೀಟರ್‍ ಅಳವಡಿಸಬೇಕು. ಅದೇ ರೀತಿ ಆಟೋ ಚಾಲಕನ ಸೀಟ್ ಹಿಂಭಾಗದಲ್ಲಿ ಪ್ರಯಾಣಿಕರಿಗೆ ಅನುಕೂಲವಾಗುವಂತೆ ವಾಹನ ಮತ್ತು ಚಾಲನಾ ಹಾಗೂ ಮಾಲೀಕರ ಪೂರ್ಣ ಮಾಹಿತಿಯನ್ನು ಒಳಗೊಂಡ ಮಾಹಿತಿ ಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು. ಒಂದು ವೇಳೆ ಕಾನೂನು, ನಿಯಮಗಳನ್ನು ಉಲ್ಲಂಘನೆ ಮಾಡಿದ್ದಲ್ಲಿ ಅವರ ಮೇಲೆ ಕಾನೂನು ರೀತಿ ಕ್ರಮಕೈಗೊಳ್ಳಲು ಸೂಚಿಸಿ ಅನಧಿಕೃತ ಆಟೋ ಸ್ಟಾಂಡ್‍ಗಳನ್ನು ತೆರವುಗೊಳಿಸಬೇಕು ತಿಳಿಸಿದರು.

ಎಸ್ಪಿ ಉಮಾ ಪ್ರಶಾಂತ್ ಮಾತನಾಡಿ, ಹರಿಹರ ನಗರದಲ್ಲಿ ಅಪಘಾತಗಳು ಸಂಭವಿಸುತ್ತಿರುವ ಹಿನ್ನಲೆಯಲ್ಲಿ ಹರಿಹರ ನಗರಸಭೆ ವತಿಯಿಂದ ಹಾಗೂ ಸುಗಮ ಸಂಚಾರಕ್ಕೆ ಬೇಕಾಗುವ ಸಿಗ್ನಲ್ ಲೈಟ್ಸ್, ಸಿಸಿ ಕ್ಯಾಮೆರಾ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಎಎಸ್ಪಿ ವಿಜಯ್‍ಕುಮಾರ್ ಎಂ.ಸಂತೋಷ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ವೀರೇಶ್, ಇಂಜಿನಿಯರ್ಸ್ , ಪೊಲೀಸ್ ಅಧಿಕಾರಿಗಳು ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top