ದಾವಣಗೆರೆ: 2020-21ನೇ ಸಾಲಿನಲ್ಲಿ ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ನೀರಿನ ಮಿತ ಬಳಕೆಗಾಗಿ ಹಸಿ ನೀರಾವರಿ ಅಳವಡಿಸಲು ಪ್ರಸಕ್ತ ಸಾಲಿನಲ್ಲಿ ಹರಿಹರ ತಾಲ್ಲೂಕಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ರೈತಬಾಂಧವರಿಗೆ ಸಹಾಯಧನ ಲಭ್ಯವಿದ್ದು, ಈ ವರ್ಗಗಳ ಆಸಕ್ತ ರೈತರು ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ರೈತಬಾಂಧವರು ಸುನೀಲ್‍ಕುಮಾರ್ ಮೊ.ಸಂ: 9741255168 ಸಹಾಯಕ ತೋಟಗಾರಿಕೆ ಅಧಿಕಾರಿ, ಕಸಬಾ ರೈತ ಸಂಪರ್ಕ ಕೇಂದ್ರ ಮತ್ತು ಸಂತೋಷ್ ಕುಮಾರ್ ಮೊ.ಸಂ: 7795103401, ಸಹಾಯಕ ತೋಟಗಾರಿಕೆ ಅಧಿಕಾರಿ, ಮಲೆಬೆನ್ನೂರು ರೈತ ಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು(ಜಿ.ಪಂ) ಹರಿಹರ ಇವರನ್ನು ಸಂಪರ್ಕಿಸಬಹುದೆಂದು ಹರಿಹರದ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



