ದಾವಣಗೆರೆ: ನಗರದ ಶಕ್ತಿ ದೇವತೆ ಶ್ರೀ ದುಗ್ಗಮ್ಮ ಜಾತ್ರೆಯನ್ನು ವ್ಯವಸ್ಥಿತವಾಗಿ ಮತ್ತು ಕಾನೂನು ಚೌಕಟ್ಟಿನಲ್ಲಿ ಆಚರಿಸಲು ಸಿದ್ಧತೆ ಮಾಡಿಕೊಂಡಿದ್ದು ಪ್ರಾಣಿಬಲಿ, ಮದ್ಯ ಮಾರಾಟ, ಗ್ಯಾಸ್ ಬಲೂನ್ ಹಾಗೂ ಅರೆಬೆತ್ತಲೆ ಸೇವೆ ನಿಷೇಧಿಸಿ ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಾತ್ರೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಜಾತ್ರೆ ಅವಧಿಯಲ್ಲಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪರಿಸರದಲ್ಲಿ ಪ್ರಾಣಿಬಲಿ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದರು.
ದಾವಣಗೆರೆ: ಶಾಸಕ ಬಿ.ಪಿ. ಹರೀಶ್ ವಿರುದ್ಧ ಜಾತಿನಿಂದನೆ ಕೇಸ್ ದಾಖಲು
ಹೀಲಿಯಂ ಗ್ಯಾಸ್ ಬಲೂನ್ ನಿಷೇಧ
ಸಾರ್ವಜನಿಕ ಸುರಕ್ಷತೆ ದೃಷ್ಟಿಯಿಂದ ಹೀಲಿಯಂ ಗ್ಯಾಸ್ ಬಲೂನ್ ಬಳಕೆಗೆ ಅವಕಾಶವಿಲ್ಲ. ದೇವಸ್ಥಾನದ ವ್ಯಾಪ್ತಿಯಲ್ಲಿ ಮದ್ಯ ಮಾರಾಟ, ಬೆತ್ತಲೆ ಹಾಗೂ ಅರೆಬೆತ್ತಲೆ ಸೇವೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಒಂದು ವೇಳೆ ಈ ಆದೇಶ ಉಲ್ಲಂಘಿಸಿದ್ರೆ ಕಠಿಣ ಕಾನೂನು ಕ್ರಮ ಎಚ್ಚರಿಕೆ ನೀಡಿದರು.
ದಾವಣಗೆರೆ: ರಸ್ತೆಯಲ್ಲಿ ಕಳೆದುಕೊಂಡಿದ್ದ ಚಿನ್ನಾಭರಣ ಕೆಲವೇ ಗಂಟೆಯಲ್ಲಿ ಪತ್ತೆ
ಪ್ರತಿದಿನ 2 ಲಕ್ಷಕ್ಕೂ ಅಧಿಕ ಜನ ಸೇರುವ ನಿರೀಕ್ಷೆ ಇದೆ. ಸೇರುವ ಜನರಿಗೆ ಕುಡಿಯುವ ನೀರು, ಶೌಚಾಲಯ ಹಾಗೂ ಆರೋಗ್ಯ ತಪಾಸಣಾ ಕೇಂದ್ರಗಳ ವ್ಯವಸ್ಥೆ ಮಾಡಬೇಕು. ಆಂಬ್ಯುಲೆನ್ಸ್ ಹಾಗೂ ಅಗ್ನಿಶಾಮಕ ವಾಹನಗಳು ತಯಾರು ಇರಬೇಕು. ರಸ್ತೆಗಳ ಗುಂಡಿ ಮುಚ್ಚುವುದು, ಚರಂಡಿ ಸ್ವಚ್ಛತೆ ಹಾಗೂ ನಿರಂತರ ವಿದ್ಯುತ್ ಪೂರೈಕೆಗೆ ಬಗ್ಗೆ ಸೂಚನೆ ನೀಡಿದರು.
ಬ್ಯಾನರ್, ಫ್ಲೆಕ್ಸ್ ಅಳವಡಿಕೆಗೆ ಪೂರ್ವಾನುಮತಿ ಕಡ್ಡಾಯ
ಜನರ ನಿಯಂತ್ರಣಕ್ಕೆ ಭದ್ರತಾ ವ್ಯವಸ್ಥೆ ನಿಯೋಜಿಸಬೇಕು. ದೇವಸ್ಥಾನದ ಪ್ರವೇಶ ದ್ವಾರ, ಪ್ರಸಾದ ತಯಾರಿಸುವ ಸ್ಥಳ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವ ಜಾಗಗಳಲ್ಲಿ ಕಡ್ಡಾಯವಾಗಿ ಸಿಸಿಟಿವಿ ಅಳವಡಿಸಬೇಕು. ಬ್ಯಾನರ್ ಮತ್ತು ಫ್ಲೆಕ್ಸ್ ಅಳವಡಿಕೆಗೆ ಪೂರ್ವಾನುಮತಿ ಪಡೆಯುವುದು ಕಡ್ಡಾಯವಾಗಿದೆ ಎಂದರು.
ದಾವಣಗೆರೆ ಉಪಚುನಾವಣೆ: ಕುಟುಂಬ ರಾಜಕಾರಣಕ್ಕೆ ಮಣಿ ಹಾಕಬೇಡಿ; ಅಹಿಂದ ವರ್ಗಕ್ಕೆ ಟಿಕೆಟ್ ನೀಡಿ
ಈ ಸಂದರ್ಭದಲ್ಲಿ ಎಸ್ಪಿ ಉಮಾ ಪ್ರಶಾಂತ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ದೇವಸ್ಥಾನದ ಟ್ರಸ್ಟ್ ಸದಸ್ಯರು ಇದ್ದರು.



