Connect with us

Dvgsuddi Kannada | online news portal | Kannada news online

ದಾವಣಗೆರೆ: ನಗರದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ಅ.15 ರಿಂದ ನವರಾತ್ರಿ ಮಹೋತ್ಸವ

davangere 12

ದಾವಣಗೆರೆ

ದಾವಣಗೆರೆ: ನಗರದೇವತೆ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ಅ.15 ರಿಂದ ನವರಾತ್ರಿ ಮಹೋತ್ಸವ

ದಾವಣಗೆರೆ: ಶ್ರೀ ದುರ್ಗಾಂಬಿಕಾ ದೇವಸ್ಥಾನ ಟ್ರಸ್ಟ್ ವತಿಯಿಂದ ನಗರದೇವತೆ ಶ್ರೀ ದುರ್ಗಾಂಬಿಕಾ ದೇವಿ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಹಾಗೂ ಪುರಾಣ ಪ್ರವಚನದ ಕಾರ್ಯಕ್ರಮ ಅ. 15ರಿಂದ 24 ರವರೆಗೆ ಆಯೋಜಿಸಲಾಗಿದೆ. ಅ. 15ರಂದು ಬೆಳಗ್ಗೆ 6.30 ರಿಂದ ದೀಪಾರಾಧನೆ, ಬ್ರಾಹ್ಮಿ ಮುಹೂರ್ತದಲ್ಲಿ ವಿಶ್ಲೇಶ್ವರ ಘಟ ಸ್ಥಾಪನೆ, ನವರಾತ್ರಿ ನವದುರ್ಗೆ ಪೂಜಾ ಕಾರ್ಯಗಳು ಜರುಗಲಿವೆ.

ಅಂದಿನಿಂದ 22 ರವರೆಗೆ ದೇವಿಗೆ ವಿಶೇಷ ಅಲಂಕಾರ‌ಮಾಡಿ ಪೂಜೆ ಸಲ್ಲಿಸಲಾಗುವುದು, ಅ.23 ರಂದು ಬೆಳಿಗ್ಗೆ 10.30 ರಿಂದ ದೇವಿಗೆ ಸಿಂಹ ವಾಹನ ಅಲಂಕಾರ ಹಾಗೂ ಆಯುಧ ಪೂಜೆ, ಕುಂಬಾಭಿಷೇಕವಿದ್ದು, ಅ. 24 ರಂದು‌ ದೇವಿಗೆ ಗಜಲಕ್ಷ್ಮಿ ಅಲಂಕಾರ ಮಾಡಿ ಅಂದು ವಿಜಯದಶಮಿ ಪ್ರಯುಕ್ತ ಬನ್ನಿ ಮುಡಿಯುವ ಕಾರ್ಯಕ್ರಮ ಏರ್ಪಡಿಸಲಾಗಿದೆ. ಅ. 25ರಂದು
ಕಳಸದ ಪೂಜೆ ಹಾಗೂ ಬೆಳಗ್ಗೆ 11.30 ಕ್ಕೆ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಶಾಮನೂರು ಶಿವಶಂಕರಪ್ಪ ಪತ್ನಿ ದಿ.ಪಾರ್ವತಮ್ಮ ಜ್ಞಾಪಕವಾಗಿ ಈ ಸಾಮೂಹಿಕ ವಿವಾಹ ಹಾಗೂ ಅನ್ನ ಸಂತರ್ಪಣೆ ಜರುಗಲಿದ್ದು, ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಪಾಲ್ಗೊಳ್ಳಬೇಕಾದ ವಧು-ವರರು ಅ. 20ರ ಒಳಗಾಗಿ ದೇವಸ್ಥಾನದ ಧರ್ಮದರ್ಶಿಯ ಸಂಪರ್ಕಿಸಬಹುದು ಎಂದು ಟ್ರಸ್ಟ್ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top