Connect with us

Dvgsuddi Kannada | online news portal | Kannada news online

ದಾವಣಗೆರೆ: ಸೈಟ್, ಮನೆಗಳ ನೋಂದಣಿಗೆ ಇ-ಆಸ್ತಿ ಕಡ್ಡಾಯ: ಹಕ್ಕು ವರ್ಗಾವಣೆಗೆ ಕಾವೇರಿ -2 ತಂತ್ರಾಂಶ ಸಂಯೋಜನೆ

ದಾವಣಗೆರೆ

ದಾವಣಗೆರೆ: ಸೈಟ್, ಮನೆಗಳ ನೋಂದಣಿಗೆ ಇ-ಆಸ್ತಿ ಕಡ್ಡಾಯ: ಹಕ್ಕು ವರ್ಗಾವಣೆಗೆ ಕಾವೇರಿ -2 ತಂತ್ರಾಂಶ ಸಂಯೋಜನೆ

ದಾವಣಗೆರೆ: ಜಿಲ್ಲೆಯಲ್ಲಿ ಸೆಪ್ಟೆಂಬರ್ 9 ರಿಂದ ಕಾವೇರಿ-2 ಇ-ಆಸ್ತಿ ತಂತ್ರಾಂಶ ಜಾರಿಗೊಂಡಿದ್ದು, ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ತಿಗಳನ್ನು ಇ-ಆಸ್ತಿ ತಂತ್ರಾಂಶ ಕಾವೇರಿ-2 ನೊಂದಿಗೆ ಸಂಯೋಜನೆಗೊಂಡಿದ್ದು ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಆಸ್ತಿ ನೊಂದಾಯಿಸಲು ಆಸ್ತಿಯ ಮಾಹಿತಿಯನ್ನು ಕಡ್ಡಾಯವಾಗಿ ಇ-ಆಸ್ತಿ ತಂತ್ರಾಂಶದಿಂದ ಪಡೆಯಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರ ಸ್ವಾಮಿ ತಿಳಿಸಿದ್ದಾರೆ.

ಕೃಷಿ ಜಮೀನಿನ ನೋಂದಣಿಗೆ ಭೂಮಿ ತಂತ್ರಾಂಶದೊಂದಿಗೆ 2006 ರಿಂದಲೇ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ತಂತ್ರಾಂಶವನ್ನು ಸಂಯೋಜನೆ ಮಾಡಲಾಗಿದೆ. ಜಮೀನಿನ ಸರ್ವೆನಕ್ಷೆ 11 ಇ-ಸ್ಕೇಚ್ ಮೋಜಣಿ ತಂತ್ರಾಂಶದೊಂದಿಗೆ ಹಾಗೂ ಕಾವೇರಿ ತಂತ್ರಾಂಶವನ್ನು ಅಕ್ಟೋಬರ್ 5, 2016 ರಿಂದ ಸಂಯೋಜನೆ ಮಾಡಲಾಗಿದೆ. ಅಲ್ಲದೇ ಗ್ರಾಪಂ ವ್ಯಾಪ್ತಿಯ ಕೃಷಿಯೇತರ ಸ್ವತ್ತುಗಳ ದಸ್ತಾವೇಜುಗಳ ನೋಂದಣಿಗಾಗಿ ಇ-ಸ್ವತ್ತು ತಂತ್ರಾಂಶವನ್ನು ಜುಲೈ 18, 2014ರ ಸುತ್ತೋಲೆಯಂತೆ ಸಂಯೋಜನೆಗೊಳಿಸಲಾಗಿದೆ.

ನಗರ ಪ್ರದೇಶಗಳಲ್ಲಿನ ಕೃಷಿಯೇತರ ಆಸ್ತಿಗಳಿಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ರೂಪಿಸಿದ್ದು, ಇ-ಆಸ್ತಿ ತಂತ್ರಾಂಶವನ್ನು ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ 2.0 ತಂತ್ರಾಂಶದೊಂದಿಗೆ ಪ್ರಾಯೋಗಿಕವಾಗಿ
ಚಾಮರಾಜನಗರ,ಚಿತ್ರದುರ್ಗ,ಬಾಗಲಕೋಟೆ ಮತ್ತು ರಾಯಚೂರು ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಸಂಬಂಧಿಸಿದಂತೆ ಕಾವೇರಿ 2.0 ತಂತ್ರಾಂಶದೊಂದಿಗೆ ಸಂಯೋಜನೆ ಮಾಡಿ 9.9.2024 ರಿಂದ ನೋಂದಣಿ ಮಾಡುತ್ತಿರುವುದು ಯಶಸ್ವಿಯಾಗಿದೆ.

ಆದ್ದರಿಂದ ನಗರಾಭಿವೃದ್ಧಿ ಇಲಾಖೆಯು ದಾವಣಗೆರೆಯ ಜಿಲ್ಲೆಯ ಎಲ್ಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಸ್ತಿಗಳ ಹಕ್ಕು ವರ್ಗಾವಣೆಗೆ ಸಂಬಂಧಿಸಿದಂತೆ ಇ-ಆಸ್ತಿ ತಂತ್ರಾಂಶ ಮತ್ತು ಕಾವೇರಿ-2 ತಂತ್ರಾಂಶವನ್ನು ಸಂಯೋಜನೆ ಮಾಡಲು ಸಮ್ಮತಿ ನೀಡಿರುವುದರಿಂದ ದಾವಣಗೆರೆ ಜಿಲ್ಲೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಸ್ಥಿರಾಸ್ಥಿಗಳ ನೋಂದಣಿಯನ್ನು ಇ-ಆಸ್ತಿ ತಂತ್ರಾಂಶದಿಂದ ಕಡ್ಡಾಯವಾಗಿ ಮಾಹಿತಿ ಪಡೆದು ನೋಂದಾಯಿಸಲು ಇ-ಆಸ್ತಿ ತಂತ್ರಾಂಶವನ್ನು ಕಾವೇರಿ-2 ತಂತ್ರಾಂಶದೊಂದಿಗೆ ಸೆಪ್ಟೆಂಬರ್ 23 ರಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ ಎಂದರು.

ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಯನ್ನು ನೋಂದಾಯಿಸಲು ಆಸ್ತಿಯ ಮಾಹಿತಿಯನ್ನು ಇ-ಆಸ್ತಿ ತಂತ್ರಾಂಶದಿಂದ ಪಡೆದು ನೋಂದಣಿ ಮಾಡುತ್ತಿದ್ದು, ಸಾರ್ವಜನಿಕರು ತಮ್ಮ ಆಸ್ತಿಯ ಮಾಹಿತಿಯನ್ನು ಇ-ಆಸ್ತಿ ತಂತ್ರಾಂಶದಲ್ಲಿ ನಮೂದಿಸಿ ಇ-ಆಸ್ತಿ ದಾಖಲೆ ಪಡೆದುಕೊಳ್ಳುವ ಮೂಲಕ ತಂತ್ರಾಂಶದ ಸದುಪಯೋಗವನ್ನು ಸಾರ್ವಜನಿಕರು ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top