Connect with us

Dvgsuddi Kannada | online news portal | Kannada news online

ದಾವಣಗೆರೆ: ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

eduction

ದಾವಣಗೆರೆ

ದಾವಣಗೆರೆ: ಶೈಕ್ಷಣಿಕ ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

ದಾವಣಗೆರೆ:  ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರದಿಂದ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿ ಆಹ್ವಾನಿಸಿದೆ.

2021-22ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಹ ಕ್ರೀಡಾಪಟುಗಳು ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಕಛೇರಿಯಲ್ಲಿ ಪಡೆಯಬಹುದು. ಅರ್ಜಿ ಸಲ್ಲಿಸಲು ಜ.13 ಕೊನೆಯ ದಿನಾಂಕವಾಗಿರುತ್ತದೆ. ಹೆಚ್ಚಿನ ವಿವರಗಳಿಗೆ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿ ದೂರವಾಣಿ 08192-237480 ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top