ದಾವಣಗೆರೆ: ಪ್ರಸಕ್ತ ಸಾಲಿನ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕರ್ನಾಟಕ ಪರೀಕ್ಷಾ ಪ್ರಾಶಧೀಕಾರದಿಂದ ಆಯ್ಕೆಯಾಗುವ ಸಿಇಟಿ ಅಥವಾ ನೀಟ್ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆಯಡಿ ವಿದ್ಯಾಭ್ಯಾಸ ಸಾಲ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ವಿದ್ಯಾರ್ಥಿಗಳು ನಿಗಮದ ವೆಬ್‍ಸೈಟ್ www.kmdconline.karnataka.gov.in ಮೂಲಕ ಅರ್ಜಿ ಸಲ್ಲಿಸಿ ಹಾರ್ಡ್ ಕಾಪಿ ಹಾಗೂ ಇಂಡೆಮಿನಿಟಿ ಬಾಂಡ್ (Indemnity) ನ್ನು ಸಂಬಂಧಪಟ್ಟ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಕೆಇಎ ಕೌನ್ಸಿಲಿಂಗ್ ಮುಗುದ ಬಳಿಕ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಕುರುಬರ ಹಾಸ್ಟೆಲ್ ಕಟ್ಟಡ, ಹದಡಿ ರಸ್ತೆ, ಜಯದೇವ ಸರ್ಕಲ್ ಹತ್ತಿರ ದಾವಣಗೆರೆ-577002 ಅಥವಾ ಫೊ.ನಂ. 08192-232349 ಕ್ಕೆ ಸಂಪರ್ಕಿಸಬಹುದು ಎಂದು ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.