Connect with us

Dvgsuddi Kannada | online news portal | Kannada news online

ದಾವಣಗೆರೆ; ಕೈಮಗ್ಗ, ಜವಳಿ ತಂತ್ರಜ್ಞಾನದ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ; ಪ್ರತಿ ತಿಂಗಳು2500 ಶಿಷ್ಯವೇತನ

ದಾವಣಗೆರೆ

ದಾವಣಗೆರೆ; ಕೈಮಗ್ಗ, ಜವಳಿ ತಂತ್ರಜ್ಞಾನದ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ; ಪ್ರತಿ ತಿಂಗಳು2500 ಶಿಷ್ಯವೇತನ

ದಾವಣಗೆರೆ: 2023-24ನೇ ಸಾಲಿನ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಪ್ರಥಮ ವರ್ಷ ಮತ್ತು ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 2 ನೇ ವರ್ಷದ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕಾಗಿ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

ಗಣಿತ, ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರದೊಂದಿಗೆ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು, ಜವಳಿ ವಿಭಾಗದ ವೃತ್ತಿಪರ ಸ್ಕೀಮ್ ನಲ್ಲಿ 10+2 ಅರ್ಹತೆ ಹೊಂದಿರಬೇಕು, ಐ.ಐ.ಹೆಚ್.ಟಿ ನಡೆಸುವ ಗಣಿತ, ಭೌತಶಾತ್ರ, ರಸಾಯನ ಶಾಸ್ತ್ರದಲ್ಲಿ ಬ್ರಿಡ್ಜ್ ಕೋರ್ಸ್ ಮಾಡಿರಬೇಕು.

ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ ಗದಗ, ಬೆಟಗೇರಿ-587102 ಇವರಿಗೆ ಮೇ.31 ರೊಳಗಾಗಿ ಸಲ್ಲಿಸಬೇಕು. ವ್ಯಾಸಂಗದ ಸಮಯದಲ್ಲಿ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳಿಗೆ ರೂ.2500 ರಂತೆ ಶಿಷ್ಯವೇತನ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ಗದಗ ಜಿಲ್ಲೆಯ ನರಸಾಪೂರ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ಪ್ರಾಂಶುಪಾಲರು ದೂ.08192262362 ಅಥವಾ ಉಪ ನಿರ್ದೇಶಕರ ಕಚೇರಿ ಕೈಮಗ್ಗ ಮತ್ತು ಜವಳಿ ಇಲಾಖೆ ಜಿಲ್ಲಾ ಪಂಚಾಯತ್ ದಾವಣಗೆರೆ ಇಲ್ಲಿಗೆ ಸಂಪರ್ಕಿಸಬಹುದೆಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top