Connect with us

Dvgsuddi Kannada | online news portal | Kannada news online

ದಾವಣಗೆರೆ: ಉನ್ನತ ವ್ಯಾಸಂಗಕ್ಕೆ ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನ

ದಾವಣಗೆರೆ

ದಾವಣಗೆರೆ: ಉನ್ನತ ವ್ಯಾಸಂಗಕ್ಕೆ ಅರಿವು ಶೈಕ್ಷಣಿಕ ಸಾಲ ಯೋಜನೆಗೆ ಅರ್ಜಿ ಆಹ್ವಾನ

ದಾವಣಗೆರೆ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮ, ಕರ್ನಾಟಕ ಅಲೆಮಾರಿ ಹಾಗೂ ಅರೆ ಅಲೆಮಾರಿ ಅಭಿವೃದ್ದಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ದಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ (ಹೊಸತು), ಅರಿವು ಶೈಕ್ಷಣಿಕ ಸಾಲ ಯೋಜನೆ (ನವೀಕರಣ) ಹಾಗೂ ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಆರ್ಥಿಕ ನೆರವು ಯೋಜನೆಗಳಲ್ಲಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆಸಕ್ತರು ಸೇವಾಸಿಂಧು ಪೋರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್‍ಲೈನ್‍ನಲ್ಲಿ ಅಕ್ಟೋಬರ್ 20 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.
ವಿದ್ಯಾರ್ಥಿಗಳು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿದ್ದು ಆಧಾರ್ ಕಾರ್ಡ್‍ನಲ್ಲಿರುವಂತೆಯೇ ರೈತರ ಹೆಸರು, ಬ್ಯಾಂಕ್ ಖಾತೆಯ ಪುಸ್ತಕದಲ್ಲಿಯೂ ಇದ್ದು, ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರದಲ್ಲಿಯೂ ಆಧಾರ್ ಕಾರ್ಡ್‍ನಲ್ಲಿರುವಂತೆ ಹೆಸರು ಹೊಂದಾಣಿಕೆಯಾಗಬೇಕು ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್‍ಸೈಟ್ www.dbcdc.karnataka.gov.in ನಲ್ಲಿ ಹಾಗೂ ಸಹಾಯವಾಣಿ ಸಂಖ್ಯೆ 08192-230934, 080-22374832, 9606066389 ಮತ್ತು 8824300400 ಗೆ ಸಂಪರ್ಕಿಸಬಹುದಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top