Connect with us

Dvgsuddi Kannada | online news portal | Kannada news online

ದಾವಣಗೆರೆ: ವಸತಿ ಶಾಲೆಯಲ್ಲಿನ 7, 8 ಮತ್ತು 9ನೇ ತರಗತಿಗಳಲ್ಲಿನ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ

IMG 20240504 080811

ಪ್ರಮುಖ ಸುದ್ದಿ

ದಾವಣಗೆರೆ: ವಸತಿ ಶಾಲೆಯಲ್ಲಿನ 7, 8 ಮತ್ತು 9ನೇ ತರಗತಿಗಳಲ್ಲಿನ ಖಾಲಿ ಸ್ಥಾನಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ದಾವಣಗೆರೆ ಜಿಲ್ಲೆಯಲ್ಲಿನ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಬರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ನಡೆಸುವ ಒಟ್ಟು 22 ವಸತಿ ಶಾಲೆಗಳು ಕಾರ್ಯನಿರ್ವಹಿಸುತ್ತಿದ್ದು, ಈ ವಸತಿ ಶಾಲೆಗಳಲ್ಲಿ 2024-25ನೇ ಸಾಲಿಗೆ 7, 8 ಮತ್ತು 9ನೇ ತರಗತಿಗಳಲ್ಲಿ ಖಾಲಿಯಿರುವ ಸ್ಥಾನಗಳನ್ನು ಜಿಲ್ಲಾ ಹಂತದಲ್ಲಿ ಪ್ರವೇಶ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಖಾಲಿ ಇರುವ ಸ್ಥಾನಗಳ ವಿವರ ಇಂತಿವೆ: 7ನೇ ತರಗತಿಯಲ್ಲಿ ಪ.ಜಾತಿ ಹೆಣ್ಣು-1, 8 ನೇ ತರಗತಿಯಲ್ಲಿ ಪ.ಜಾತಿ ಹೆಣ್ಣು-2. ಪ್ರವರ್ಗ-1 ರಲ್ಲಿ ಹೆಣ್ಣು-1, 2ಎ ರಲ್ಲಿ ಹೆಣ್ಣು-1, 3ಬಿ ಯಲ್ಲಿ ಗಂಡು-1 ಹಾಗೂ 9ನೇ ತರಗತಿಯಲ್ಲಿ ಪ.ಜಾತಿ ಹೆಣ್ಣು-1. ಪ.ವರ್ಗದಲ್ಲಿ ಹೆಣ್ಣು- 5 ಒಟ್ಟು 12 ಸ್ಥಾನಗಳು ಖಾಲಿಯಿರುತ್ತವೆ. ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಜಿಲ್ಲೆಯ ಯಾವುದೇ ಶಾಲೆಯಲ್ಲಿ ಸ್ಥಾನ ಲಭ್ಯವಿರುವುದಿಲ್ಲ.

ಮೇಲ್ಕಾಣಿಸಿದ ಖಾಲಿ ಸ್ಥಾನಗಳನ್ನು ಹೊರತು ಪಡಿಸಿ ಇತರೆ (ಲಿಂಗ, ಜಾತಿ) ಆಸಕ್ತಿಯಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಿದಲ್ಲಿ, ವಸತಿ ಶಾಲೆಗಳಲ್ಲಿ ಮುಂದಿನ ದಿನಗಳಲ್ಲಿ ಖಾಲಿಯಾಗಬಹುದಾದ ಸ್ಥಾನಗಳಿಗೆ ಹೆಚ್ಚುವರಿ ಆಯ್ಕೆಪಟ್ಟ(Waiting List) ಮೆರಿಟ್ ಮತ್ತು ಮೀಸಲಾತಿ ಆಧಾರದ ಮೇಲೆ ವಿದ್ಯಾರ್ಥಿಗಳನ್ನು ದಾಖಲಾತಿಗೆ ಪರಿಗಣಿಸಲಾಗುವುದು

ಅರ್ಜಿಗಳನ್ನು ಸಮೀಪದ ಮೊರಾರ್ಜಿದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಶ್ರೀಮತಿ ಇಂದಿರಾಗಾಂಧಿ, ಡಾ.ಬಿ.ಆರ್ ಅಂಬೇಡ್ಕರ್, ಪ್ರತಿಭಾನ್ವಿತ ಹೆಣ್ಣುಮಕ್ಕಳ ವಸತಿ ಶಾಲೆಗಳಲ್ಲಿ ಮೇ.17 ರಿಂದ ಪಡೆಯಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ಮೇ.31 ರೊಳಗಾಗಿ ಜಂಟಿ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ, ದಾವಣಗೆರೆ ಇಲ್ಲಿ ಕಡ್ಡಾಯವಾಗಿ ಸಲ್ಲಿಸುವುದು. ಜೂನ್ 5ರಂದು ಮೊರಾರ್ಜಿದೇಸಾಯಿ ವಸತಿ ಶಾಲೆ ದೇವರಬೆಳಕೆರೆ, ಹರಿಹರ ತಾಲ್ಲೂಕು ಇಲ್ಲಿ ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ.ಕೆ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

  • astrology today astrology today

    ಪ್ರಮುಖ ಸುದ್ದಿ

    ಮಂಗಳವಾರದ ರಾಶಿ ಭವಿಷ್ಯ 24 ಜೂನ್ 2025

    By

    ಈ ರಾಶಿಯ ವಿಚ್ಛೇದನ ಪಡೆದ ಪತಿ ಪತ್ನಿ ಮತ್ತೆ ಸೇರೋ ಬಯಕೆ, ಈ ರಾಶಿಯ ಮಾಜಿ ಸಂಗಾತಿ ಹಠಾತ್ ಭೇಟಿಯಾಗುವರು, ಮಂಗಳವಾರದ...

To Top