ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಶನ್‌ನಿಂದ ಮಾನ್ಯತೆ ಪಡೆದಿರುವ ಜಿಲ್ಲೆಯ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 31 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಶೈಕ್ಷಣಿಕ ಶುಲ್ಕ ಮರುಪಾವತಿ
ಪ್ರಸಕ್ತ ಸಾಲಿನಲ್ಲಿ ಎನ್.ಐ.ಎಸ್ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರ ಕಾರ್ಯಾಲಯ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಕ್ರೀಡಾಂಗಣ, ದಾವಣಗೆರೆ ಇಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ಜನವರಿ 31 ರೊಳಗಾಗಿ ಕಚೇರಿಗೆ ಸಲ್ಲಿಸಬೇಕೆಂದು ಇಲಾಖೆಯ ಸಹಾಯಕ ನಿರ್ದೇಶಕಾದ ರೇಣುಕಾ ತಿಳಿಸಿದ್ದಾರೆ.
ಹರಿಹರ: ಈ ಪ್ರದೇಶದಲ್ಲಿ ನಾಳೆ ಸಂಜೆ 6 ಗಂಟೆವರೆಗೆ ವಿದ್ಯುತ್ ವ್ಯತ್ಯಯ
ವ್ಯಕ್ತಿ ನಾಪತ್ತೆ
ಬಿಳಿಚೋಡು ಪೊಲೀಸ್ ಠಾಣೆ ವ್ಯಾಪ್ತಿಯ ಅಗಸನಹಳ್ಳಿ ಗ್ರಾಮ ಸುಮಾರು 32 ವರ್ಷ ವಯಸ್ಸಿನ ವಿಜಯಕುಮಾರ್ ಬಿನ್ ಹನುಮಂತಪ್ಪ ಇವರು ದಿ.7-9-2025 ರಂದು ಮನೆಯಿಂದ ಹೋದವರು ಇದೂವರೆಗೂ ವಾಪಾಸ್ ಬಂದಿರುವುದಿಲ್ಲ.
ಚಹರೆ ವಿವರ: 5.4 ಅಡಿ ಎತ್ತರ, ದಪ್ಪ ಮೈಕಟ್ಟು, ಎಣ್ಣೆಗೆಂಪು ಮೈಬಣ್ಣ, ದುಂಡು ಮುಖ, ಕನ್ಡ ಭಾಷೆ ಮಾತನಾಡುತ್ತಾರೆ. ಮನೆಯಿಂದ ಹೋಗುವಾಗ ಆಕಾಶ ನೀಲಿ ಕಲರ್ ಶರ್ಟ್, ಬಣ್ಣದ ಪ್ಯಾಂಟ್ ಧರಿಸುತ್ತಾರೆ. ಇವರ ಬಗ್ಗೆ ಮಾಹಿತಿ ಸಿಕ್ಕರೇ ದೂ.ಸಂ:08196-248244, 253100, 9480803269 ನ್ನು ಸಂಪರ್ಕಿಸಬೇಕೆAದು ಪೊಲೀಸ್ ಸಬ್‌ಇನ್ಸ್ಪೆಕ್ಟರ್ ತಿಳಿಸಿದ್ದಾರೆ.
ವ್ಯಕ್ತಿ ಕಾಣೆ
ಮಲೇಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಹರಿಜನ ಅಶೋಕ ಬಿನ್ ನಾಗರಾಜ ಸುಮಾರು 29 ವರ್ಷ, ಇವರು ದಿನಾಂಕ: 8-1-2026 ರಂದು ಉಕ್ಕಡಗಾತ್ರಿಯ ಕರಿಬಸವೇಶ್ವರ ದೇವಸ್ಥಾನದಿಂದ ಕಾಣೆಯಾಗಿರುತ್ತಾರೆ.
ಚಹರೆ ವಿವರ: 5.4 ಅಡಿ ಎತ್ತರ, ಕೋಲುಮುಖ, ಕನ್ನಡ ಮತ್ತು ತೆಲುಗು ಮಾತನಾಡುತ್ತಾರೆ. ಇವರ ಸುಳಿವು ಕಂಡುಬಂದರೆ ದೂ.ಸಂ: 08192-253100, 268758, 272018, 9480803234 ನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.



