ದಾವಣಗೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿಗೆ ಮೋಟರ್ ವಿದ್ಯುತ್ ಶಾಕ್ ನಿಂದಾಗಿ ಒಂದೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಸೊರಟೂರು ಗ್ರಾಮದಲ್ಲಿ ನಡೆದಿದೆ.
ಒಂದೂವರೆ ವರ್ಷದ ಮಂಜುನಾಥ್ ಮೃತಪಟ್ಟ ಮಗುವಾಗಿದೆ. ಮಗುವಿನ ತಾಯಿ ಮನೆಯಲ್ಲಿ ನೀರು ತುಂಬಿಸಿಕೊಳ್ಳಲು ನಲ್ಲಿಗೆ ಮೋಟರ್ ಆನ್ ಮಾಡಿದ್ದರು.ಆಟವಾಡುತ್ತಿದ್ದ ಮಗು ಮೋಟರ್ ಸಂಪರ್ಕಿಸುವ ವಿದ್ಯುತ್ ವೈರ್ ಮುಟ್ಟಿದೆ. ತಕ್ಷಣ ಮಗುವಿಗೆ ವಿದ್ಯುತ್ ಶಾಕ್ ಹೊಡೆದಿದಿದೆ. ಸ್ಥಳೀಯ ಕೂಡಲೇ ಮಗುವನ್ನು ಹೊನ್ನಾಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದರು. ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ, ಮಗು ಮೃತಪಟ್ಟಿರುವುದಾಗಿ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಮಗು ಕಳೆದುಕೊಂಡ ತಂದೆ, ತಾಯಿಯ ಆಕ್ರಂದನ ಮುಗಿಲು ಮುಟ್ಟಿತ್ತು. ಈ ಬಗ್ಗೆ ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.