Connect with us

Dvgsuddi Kannada | online news portal | Kannada news online

ದಾವಣಗೆರೆ: ಎಂಬ್ರಾಯ್ಡರಿ ‌ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

embroidery work

ದಾವಣಗೆರೆ

ದಾವಣಗೆರೆ: ಎಂಬ್ರಾಯ್ಡರಿ ‌ವರ್ಕ್ ಉಚಿತ ತರಬೇತಿಗೆ ಅರ್ಜಿ ಆಹ್ವಾನ

ದಾವಣಗೆರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‍ನ ಸಹಯೋಗದಲ್ಲಿ ನಡೆಸುತ್ತಿರುವ ರುಡ್‍ಸೆಟ್ ಸಂಸ್ಥೆಯ ವತಿಯಿಂದ ಎಂಬ್ರಾಯ್ಡರಿ, ಆರಿ ವರ್ಕ್ & ಫ್ಯಾಬ್ರಿಕ್ ಪೇಟಿಂಗ್ ಕುರಿತ 30 ದಿನಗಳ ಉಚಿತ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.
ತರಬೇತಿಯು ಕಡ್ಡಾಯವಾಗಿ ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರ ವಿತರಿಸಲಾಗುವುದು.

ಅರ್ಜಿ ಸಲ್ಲಿಸಲು ಅಕ್ಟೋಬರ್ 8 ಕೊನೆ ದಿನವಾಗಿರುತ್ತದೆ.ಹೆಚ್ಚಿನ ಮಾಹಿತಿಗಾಗಿ ರುಡ್‍ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ದೂ.ಸಂ. 9740982585, 9380162042 ಗೆ ಸಂಪರ್ಕಿಸಬಹುದಾಗಿದೆ ಎಂದು ರುಡ್‍ಸೆಟ್ ಸಂಸ್ಥೆಯ ಶಾಖೆಯ ನಿರ್ದೇಶಕರಾದ ರವಿಕುಮಾರ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top