ದಾವಣಗೆರೆ: ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಸಾಸ್ವೆಹಳ್ಳಿ ಪಂಪ್‍ಹೌಸ್‌ನಲ್ಲಿ ವಿದ್ಯುತ್ ಅವಘಡ ಸಂಭವಿಸಿದ್ದು, ಬೆಂಗಳೂರಿನ ಎಲೆಕ್ಟ್ರಿಕಲ್ ಸರ್ವೀಸ್ ಎಂಜಿನಿಯರ್ ಮೃತಪಟ್ಟ ಘಟನೆ ನಡೆದಿದೆ.
ಎಸ್.ವೆಂಕಟೇಶ್ (40) ಮೃತಪಟ್ಟ ಎಂಜಿನಿಯರ್. ವೆಂಕಟೇಶ್ 10 ವರ್ಷಗಳಿಂದ ಬೆಂಗಳೂರಿನ ಲೋಡ್ ಕಂಟ್ರೋಲ್ ಇಂಡಿಯಾ ಪ್ರೈ ಲಿ.ನಲ್ಲಿ ಎಲೆಕ್ಟ್ರಿಕಲ್ ಸರ್ವೀಸ್ ಎಂಜಿನಿಯರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಧಿಕಾರಿಗಳು ಸೂಕ್ತ ಮುಂಜಾಗ್ರತಾ ಕ್ರಮ ವಹಿಸದಿದ್ದರಿಂದ ಈ ಅವಘಡ ಸಂಭವಿಸಿದ್ದು, ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು ಎಂದು ಮೃತರ ತಂದೆ ದೂರು ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.



