ದಾವಣಗೆರೆ: ಕೇಂದ್ರದಿಂದ ಬರ ಪರಿಹಾರ, ಅನುದಾನ ಬಂದಿಲ್ಲವೆಂದು ದಿಲ್ಲಿಯಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ರಾಜ್ಯದ ಮಾನ ಕಳೆದಿದೆ. ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಲೋಕಸಭೆ ಚುನಾವಣೆಯಲ್ಲಿ ಜನ ತಕ್ಕ ಪಾಠ ಕಲಿಸಲಿದ್ದಾರೆ. ಹಾಗೆಯೇ ಜಿಲ್ಲಾ ಬಿಜೆಪಿ ನಾಯಕರು ಭಿನ್ನಮತ ಮರೆತು ಒಟ್ಟಾಗಿ ಕೆಲಸ ಮಾಡುವಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸೂಚಿಸಿದರು.
ಬಿಜೆಪಿ ಜಿಲ್ಲಾ ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿ, ಗ್ಯಾರಂಟಿ ಯೋಜನೆ ಭರವಸೆ ನೀಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಎಲ್ಲಾ ಗ್ಯಾರಂಟಿ ಜಾರಿಗೆ ತಂದಿಲಲ್ಲ. ಸರ್ಕಾರಿ ದುಡ್ಡಲ್ಲಿ ಜಾಹೀರಾತು ನೀಡಿ ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ಸುಳ್ಳು ಹೇಳಿ ಸಿಕ್ಕಿ ಹಾಕಿಕೊಂಡಿದೆ. ಕೇಂದ್ರ ಸರ್ಕಾರ ಬರ ಪರಿಹಾರಕ್ಕೆ 6 ಸಾವಿರ ಕೋಟಿ ಕೊಟ್ಟಿದೆ. ಈ ಭ್ರಷ್ಟ ಕಾಂಗ್ರೆಸ್ ಸರ್ಕಾರಕ್ಕೆ ಲೊಕಸಭಾ ಚುನಾವಣೆಯಲ್ಲಿ ಜನರು ತಕ್ಕ ಪಾಠ ಕಲಿಸುತ್ತಾರೆ.ದೇಶ ವಿಭಜನೆ ಮಾಡುವವರನ್ನು ಕೆಲವೇ ದಿನಗಳಲ್ಲಿ ತಿರಸ್ಕರಿಸಲಿದ್ದಾರೆ. ರಾಜ್ಯದ 28 ಲೋಕಸಭೆ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ. ಇದಕ್ಕೆ ಜನರ ಸಹಕಾರ ಬೇಕು ಎಂದರು.
ಪದಗ್ರಹಣ ಸಮಾರಂಭಕ್ಕೆ ಸಂಸದ ಜಿಎಂ ಸಿದ್ದೇಶ್ವರ ಬಂದಿಲ್ಲ ಎಂದು ತಪ್ಪಾಗಿ ಭಾವಿಸಬೇಡಿ. ಅವರೊಟ್ಟಿಗೆ ದೂರವಾಣಿಯಲ್ಲಿ ಮಾತನಾಡಿದ್ದು ಅವರೇ ಕಾರ್ಯಕ್ರಮಕ್ಕೆ ಹೋಗಿ ಯಶಸ್ವಿಯಾಗಿ ಮಾಡಿ ಎಂದು ಹೇಳಿದ್ದಾರೆ. ಎಲ್ಲರು ಸಿದ್ದೇಶ್ವರ ಅವರನ್ನು ಗೌರವದಿಂದ ಕಾಣಬೇಕು. ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಗೆಲ್ಲಿಸಬೇಕು. ಸಿದ್ದೇಶ್ವರ ಅವರು ದಾವಣಗೆರೆ ಮಾತ್ರವಲ್ಲ ರಾಜ್ಯದ ಅಭಿವೃದ್ಧಿ ಶಕ್ತಿ ನೀಡಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ. ಸಿದ್ದೇಶ್ವರ್ ಸೇರಿ ಎಲ್ಲರು ಒಟ್ಟಾಗಿ ಕೆಲಸ ಮಾಡಿ. ಮುಂಬರುವ ಲೋಕಸಭೆ ಚುನಾವಣೆಗೆ ಯಾರೇ ಸ್ಪರ್ಧಿಸಿದಲೂ ಗೆಲ್ಲಿಸಿ ಕಳುಹಿಸಿ ಎಂದರು.



