ದಾವಣಗೆರೆ: 2022-23ನೇ ಸಾಲಿಗೆ ಆತ್ಮ ಯೋಜನೆಯ ತಾಲ್ಲೂಕು ಮಟ್ಟ, ಜಿಲ್ಲಾ ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಮತ್ತು ಜಿಲ್ಲಾ ಮಟ್ಟದ ಆಸಕ್ತ ಗುಂಪು ಪ್ರಶಸ್ತಿಗೆ ಆಸಕ್ತ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸಂಬಂಧಪಟ್ಟ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಗೆ ಸಲ್ಲಿಸಲು ಆ.22 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗೆ ದಾವಣಗೆರೆ ಜಿಲ್ಲೆಯ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕರು/ರೈತ ಸಂಪರ್ಕ ಕೇಂದ್ರದ ಅಧಿಕಾರಿಗಳನ್ನು ಕಛೇರಿಯ ವೇಳೆಯಲ್ಲಿ ಸಂಪರ್ಕಿಸಬಹುದೆಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.