ದಾವಣಗೆರೆ: 2025-26ನೇ ಸಾಲಿನ ಕೃಷಿ ಪ್ರಶಸ್ತಿಗೆ ಆನ್‍ಲೈನ್ ಮೂಲಕ ಬೆಳೆ ಸ್ಪರ್ಧೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲಾ ಮಟ್ಟಕ್ಕೆ ಮುಸುಕಿನಜೋಳ (ಮಳೆಯಾಶ್ರಿತ) ಬೆಳೆಯನ್ನು ನಿಗದಿಪಡಿಸಲಾಗಿದ್ದು, ತಾಲ್ಲೂಕು ಮಟ್ಟಕ್ಕೆ ದಾವಣಗೆರೆ, ಚನ್ನಗಿರಿ, ಹರಿಹರ ಹಾಗೂ ಹೊನ್ನಾಳಿ ತಾಲ್ಲೂಕುಗಳಿಗೆ ಭತ್ತ (ನೀರಾವರಿ) ಮತ್ತು ನ್ಯಾಮತಿ ಹಾಗೂ ಜಗಳೂರು ತಾಲ್ಲೂಕುಗಳಿಗೆ ಶೇಂಗಾ (ಮಳೆಯಾಶ್ರಿತ) ಬೆಳೆಗಳನ್ನು ನಿಗದಿಪಡಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ 30 ಕೊನೆಯ ದಿನವಾಗಿರುತ್ತದೆ. ಪ್ರಸಕ್ತ ಸಾಲಿನ ಕೃಷಿ ಪ್ರಶಸ್ತಿಗೆ ಕೆ.ಕಿಸಾನ್ ಪೋರ್ಟಲ್‍ನಲ್ಲಿ ಆರ್‍ಎಸ್‍ಕೆ ಲಾಗಿನ್ ಅಥವಾ ಸಿಟಿಜನ್ ಲಾಗಿನ್ ಮೂಲಕ ಹತ್ತಿರದ ರೈತ ಸಂಪರ್ಕ ಕೇಂದ್ರ, ನಾಗರೀಕ ಸೇವಾ ಕೇಂದ್ರ, ಸ್ವತ: ಆಸಕ್ತ ರೈತ ಮತ್ತು ರೈತ ಮಹಿಳೆಯರು ಪ್ರತ್ಯೇಕವಾಗಿ ಅಗತ್ಯ ದಾಖಲಾತಿಗಳೊಂದಿಗೆ ರೈತ ಎಫ್‍ಐಡಿ ಯನ್ನು ಬಳಸಿಕೊಂಡ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರ/ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸಲು ಕೃಷಿ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.



